Bengalurukaranataka

ರಾಜ್ಯದಲ್ಲಿ ದ್ವಿತಿಯ ಪಿಯುಸಿ ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯುಸಿ ಡೈರೆಕ್ಟ್ ಪಾಸ್


ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ತಾಂಡವ ಡುತ್ತಿದ್ದು ಪಿಯುಸಿ ಪರೀಕ್ಷೆಗಳ ಮೇಲೂ ಕರಿ ನೆರಳಿನ ಛಾಯೆ ಬಿದ್ದಿದೆ. ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕೆ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ನೇರವಾಗಿ ಪ್ರಮೋಟ್ (ಉತ್ತಿರ್ಣ) ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

 


Leave a Reply