Belagavi

ಕೋವಿಡ್-೧೯ ಖಾಸಗಿ ಆಸ್ಪತ್ರೆಗಳ ರೋಗಿಗಳಿಗೆ ಆಮ್ಲಜನಕ ಒದಗಿಸಿ ಜೀವರಕ್ಷಿಸಿದ ಬಿಮ್ಸ್


ಬೆಳಗಾವಿ, ಮೇ.೦೪ : ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ನೆರವಿಗೆ ಧಾವಿಸಿದ ಬಿಮ್ಸ್ ವೈದ್ಯರು ಸೋಮವಾರ ಮಧ್ಯರಾತ್ರಿ ೨೧ ಜನರಿಗೆ ಆಮ್ಲಜನಕ ಒದಗಿಸಿ ತುರ್ತು ಚಿಕಿತ್ಸೆ ನೀಡುವ ಮೂಲಕ ಜೀವ ರಕ್ಷಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಸೋಮವಾರ ಮಧ್ಯರಾತ್ರಿ ಆಕ್ಸಿಜನ್ ಕೊರತೆ ಕಂಡುಬAದಿತ್ತು. ಆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಲಭ್ಯವಿಲ್ಲದ್ದರಿಂದ ಅಲ್ಲಿನ ವೈದ್ಯರು ಬಿಮ್ಸ್ ವೈದ್ಯರ ನೆರವು ಕೇಳಿದರು.
ಇದಕ್ಕೆ ತಕ್ಷಣವೇ ಸ್ಪಂದಿಸಿದ ಬಿಮ್ಸ್ ಆ ಎಲ್ಲ ೨೧ ರೋಗಿಗಳನ್ನು ಬಿಮ್ಸ್ ಗೆ ಸ್ಥಳಾಂತರಿಸಿಕೊAಡು ಆಕ್ಸಿಜನ್ ಒದಗಿಸುವ ಜತೆಗೆ ಅಗತ್ಯ ಚಿಕಿತ್ಸೆಯನ್ನು ನೀಡುವ ಮೂಲಕ ತನ್ನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ.
ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಶಕ್ತಿಮೀರಿ ಪ್ರಯತ್ನಿಸುತ್ತಿವೆ. ಆದಾಗ್ಯೂ ಕೆಲವೊಮ್ಮೆ ಇಂತಹ ಸನ್ನಿವೇಶಗಳು ಎದುರಾದಾಗ ರೋಗಿಗಳ ಜೀವರಕ್ಷಣೆಗಾಗಿ ಪರಸ್ಪರ ಸಹಕಾರದಿಂದ ಕೆಲಸ ಮಾಡುತ್ತಿದ್ದೇವೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.
ಬಿಮ್ಸ್ ನಲ್ಲಿ ಮೂರುನೂರು ಹಾಸಿಗೆಗಳ ಒಂದು ಬ್ಲಾಕ್ ಅನ್ನು ಕೋವಿಡ್-೧೯ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಡಲಾಗಿದೆ. ಇಂದು ಮಧ್ಯಾಹ್ನದವರೆಗೆ ಒಟ್ಟಾರೆ ೨೮೭ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಂಜೆ ವೇಳೆಗೆ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು. ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದುಕೊಂಡು ಆಸ್ಪತ್ರೆಯ ಇನ್ನೊಂದು ಬ್ಲಾಕ್ ಅನ್ನು ಕೂಡ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಒದಗಿಸಲಾಗುವುದು ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ. ಸಂಜೆ ವೇಳೆಗೆ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು. ಜಿಲ್ಲಾಧಿಕಾರಿಗಳ
ಅನುಮೋದನೆ ಪಡೆದುಕೊಂಡು ಆಸ್ಪತ್ರೆಯ ಇನ್ನೊಂದು ಬ್ಲಾಕ್ ಅನ್ನು ಕೂಡ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಒದಗಿಸಲಾಗುವುದು ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.


Leave a Reply