NationalNew DelhiState

ಹೈಕೋರ್ಟ್ ನಿಂದಲೂ ಕೇಂದ್ರಕ್ಕೆ ಬಿಸಿ:  ರಾಜ್ಯಕ್ಕೆ ಪ್ರತಿದಿನ 1200 ಮೆಟ್ರಿಕ್ ಟನ್ ದ್ರವ ರೂಪದ ಆಮ್ಲಜನಕ ಪೂರೈಕೆ


ನವದೆಹಲಿ: ಕರ್ನಾಟಕ ರಾಜ್ಯಕ್ಕೆ ಪ್ರತಿದಿನ 1200 ಮೆಟ್ರಿಕ್ ಟನ್ ದ್ರವ ರೂಪದ ಆಮ್ಲಜನಕ ಪೂರೈಕೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು ಕೇಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸಿದೆ.

ಕೇಂದ್ರ ಸರ್ಕಾರ ಏಪ್ರಿಲ್ 30ರಂದು ಮಂಜೂರು ಮಾಡಿದ್ದ 850 ಮೆಟ್ರಿಕ್ ಟನ್ ಸಾಲುತ್ತಿಲ್ಲ. ಅದಕ್ಕಾಗಿ ಕರ್ನಾಟಕ ಸರ್ಕಾರ ತನ್ನ ಬೇಡಿಕೆಯಷ್ಟು ಆಮ್ಲಜನಕವನ್ನು ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮರು ಪ್ರಸ್ತಾವನೆ ಸಲ್ಲಿಸಬೇಕು. ಅದನ್ನು ಕೇಂದ್ರ ಸರ್ಕಾರ ಪರಿಶೀಲನೆ ನಡೆಸಿ ನಾಲ್ಕು ದಿನಗಳಲ್ಲಿ ಕನಿಷ್ಟ ಅಗತ್ಯವಾದ 1200 ಮೆಟ್ರಿಕ್ ಟನ್ ಆಮ್ಲಜನಕವನ್ನು ಪೂರೈಕೆ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ಕೇಂದ್ರಕ್ಕೆ ಆದೇಶ ನೀಡಿತ್ತು.

ಈ ಆದೇಶವನ್ನು ತಡೆಹಿಡಿಯುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು ರಾಜ್ಯ ಸರ್ಕಾರಗಳ ಆಮ್ಲಜನಕಗಳ ಬೇಡಿಕೆಯನ್ನು ಸಮರ್ಪಕ ರೀತಿಯಲ್ಲಿ ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಪ್ರತಿಯೊಂದು ರಾಜ್ಯಕ್ಕೂ ಆಮ್ಲಜನಕದ ಅಗತ್ಯ ಇರುವುದು ನಮ್ಮ ಗಮನಕ್ಕೆ ಬಂದಿದೆ. ಆದರೆ ದೇಶದ ಪ್ರತಿಯೊಂದ ಹೈಕೋರ್ಟ್ ಆಮ್ಲಜನಕ ಪೂರೈಕೆಯನ್ನು ಹೆಚ್ಚಳ ಮಾಡಬೇಕು ಎಂದು ಆದೇಶ ನೀಡುತ್ತಾ ಹೋದರೆ ಅದನ್ನು ಪಾಲನೆ ಮಾಡುವುದು ಕಷ್ಟವಾಗಲಿದೆ. ಅದಕ್ಕಾಗಿ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು.

ಆದರೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ಮೇಲ್ಮನವಿಯನ್ನು ವಜಾಗೊಳಿಸಿದೆ.

 


Leave a Reply