vijayapur

‘ಕೋವಿಡ್ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ಒದಗಿಸಿ: ಲೋಪಕ್ಕೆ ಅವಕಾಶ ನೀಡದಿರಿ’: ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ


ವಿಜಯಪುರ:ಮೇ:೭: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದು , ಆಸ್ಪತ್ರೆಗಳಲ್ಲಿಯೂ ಯಾವುದೇ ರೋಗಿಗಳಿಗೆ ತೊಂದರೆಯಾಗದAತೆ ನೋಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮುದ್ದೇಬಿಹಾಳದಲ್ಲಿಂದು ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಿದ ಅವರು,ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಲು ಅವರು ಸೂಚನೆ ನೀಡಿದರು.
ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಎಲ್ಲ ಕೋವಿಡ್ ರೋಗಿಗಳಿಗೆ ಮತ್ತು ಕೋವಿಡೇತರ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ಒದಗಿಸಲು ಸೂಚಿಸಿದ್ದು, ಆಸ್ಪತ್ರೆಗಳಲ್ಲಿ ಯಾವುದೇ ರೀತಿಯ ಕೊರತೆ ಇರದಂತೆ ನೋಡಿಕೊಳ್ಳಬೇಕೆಂದು ಅವರು ಸೂಚಿಸಿದರು.
ಕೋವಿಡ್ ರೋಗಿಗಳ ಬಗ್ಗೆ ಸೂಕ್ತ ಗಮನ ನೀಡಬೇಕು.ತಾಲೂಕು ಆಸ್ಪತ್ರೆಯಲ್ಲಿ ಸಮರ್ಪಕವಾಗಿ ಬೆಡ್ಗಳು ಇರುವಂತೆ ನೋಡಿಕೊಳ್ಳಬೇಕು. ಆಕ್ಸಿಜನ್ ಬಗ್ಗೆ ಪೂರ್ವಭಾವಿಯಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಹೆಚ್ಚಿನ ಚಿಕಿತ್ಸೆಗಾಗಿ ಅವಶ್ಯಕತೆ ಇರುವಕಡೆ ತುರ್ತು ಸೇವೆಗೆ ಸಕಲ ಕ್ರಮಗಳನ್ನು ಕೈಗೊಳ್ಳಲು ಅವರು ಸೂಚನೆ ನೀಡಿದರು.
ತೀವ್ರವಾಗಿ ಬೆಳೆಯುತ್ತಿರುವ ಕೋವಿಡ್ ಮಹಾಮಾರಿ ನಿಯಂತ್ರಣ ಮಾಡಲು ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲು ತಿಳಿಸಿದ ಅವರು ಕೋವಿಡ್ ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸೌಲಭ್ಯ ಇರುವಂತೆ ನೋಡಿಕೊಳ್ಳಲು ಅವರು ಸೂಚಿಸಿದರು.
ರೆಮ್‌ಡಿಸಿವರ್ ಲಸಿಕೆಯನ್ನು ವೈದ್ಯರ ಸಲಹೆ ಆಧಾರದಲ್ಲಿ ನೀಡಬೇಕು. ಆಕ್ಸಿಜನ್ ಪ್ಲಾಂಟ ಮುದ್ದೇಬಿಹಾಳದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವೈದ್ಯರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಖ ಗ್ರುಪ್ ನೌಕರರಿಗೆ ಸರಿಯಾಗಿ ವೇತನ ಆಗುವಂತೆ ನೋಡಿಕೊಳ್ಳಬೇಕು. ಹೋಮ್ ಕ್ವಾರಂಟೈನ್ ಬಗ್ಗೆ ನಿಗಾಇಡುವ ಜೊತೆಗೆ ಅವರಿಗೆ ಅಲ್ಲಿ ಇದ್ದವರಿಗೆ ಸಮರ್ಪಕವಾಗಿ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಸಚಿವರು ಸೂಚನೆ ನೀಡಿದರು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ,ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ತಾಲೂಕು ಆರೋಗ್ಯ ಅಧಿಕಾರಿ ಡಾ.ಸತೀಶ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply