Belagavi

“ಗ್ರಾಮಕಾಯಕ ಮಿತ್ರ ” ಹುದ್ದೆಗಳಿಗೆ ಅರ್ಜಿಆಹ್ವಾನ


ಬೆಳಗಾವಿ: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ “ಗ್ರಾಮ ಕಾಯಕ ಮಿತ್ರ” ಹುದ್ದೆಗೆ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 29 ಸಾವಿರ ಮಾನವ ದಿನಗಳಿಗಿಂತ ಹೆಚ್ಚಿನ ಉದ್ಯೋಗ ಸೃಜನೆ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸಂಬಂಧಿಸಿದ ಅರ್ಜಿದಾರರು, ತಮಗೆ ಸ0ಬ0ಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಮೇ.5 ರಿ0ದ ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಾಮ ಪಂಚಾಯಿತಿಗೆ ಒಂದರAತೆ ಬೆಳಗಾವಿ ತಾಲೂಕಿನಲ್ಲಿರುವ 24 ಗ್ರಾಮ ಪಂಚಾಯಿತಿಗಳಿಗೆ, ಬೈಲಹೊಂಗಲ್ 22, ಗೋಕಾಕದಲ್ಲಿರುವ 14 , ಮೂಡಲಗಿಯಲ್ಲಿರುವ 10 , ರಾಮದುರ್ಗದ 26, ಹಾಗೂ ಸವದತ್ತಿಯಲ್ಲಿರುವ 24 ಗ್ರಾಮ ಪಂಚಾಯಿತಿಗಳು ಸೇರಿದಂತೆ ಒಟ್ಟು 6 ತಾಲೂಕುಗಳಲ್ಲಿರುವ 120 ಗ್ರಾಮ ಪಂಚಾಯಿತಿಗಳಲ್ಲಿ “ಗ್ರಾಮ ಕಾಯಕ ಮಿತ್ರ” ಹುದ್ದೆಗೆ ನೇಮಕಾತಿ ನಡೆಯಲಿದೆ. ಗ್ರಾಮ ಪಂಚಾಯತಿಯಲ್ಲಿ ಮೇ.5 ರಿಂದ ಅರ್ಜಿಗಳನ್ನು  ಸಲ್ಲಿಸಬಹುದು ಹಾಗೂ ಅರ್ಜಿಗಳನ್ನು ಸಲ್ಲಿಸಲು ಮೇ.20 ಕೊನೆಯ ದಿನಾಂಕವಾಗಿರುತ್ತದೆ.
ಅರ್ಹತೆಗಳು:
“ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಯು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ದಿನಾಂಕ:01.01.2021ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ ಹೊಂದಿರಬೇಕು.
ಅಭ್ಯರ್ಥಿಯು ಕೆಳದ 03 ವರ್ಷಗಳಲ್ಲಿ (2018-19, 2020-21 ಹಾಗೂ 2020-21) ಕನಿಷ್ಠ ಎರಡು ವರ್ಷ ಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಿರಬೇಕು ಮತ್ತು ವಯೋಮಿತಿ-ದಿನಾಂಕ:01.01.2021ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಬಾರದು.
ಓದು ಬರಹ ಚೆನ್ನಾಗಿ ತಿಳಿದಿರಬೇಕು ಹಾಗೂ ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅಲ್ಲದೇ,ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನು ಹೊಂದಿರಬೇಕು.
ತಾಲೂಕು ಆಯ್ಕೆ ಸಮಿತಿಯು ಅರ್ಜಿಗಳನ್ನು ಪರಿಶೀಲಿಸಿ, ಮೆರಿಟ್ ಪಟ್ಟಿ ತಯಾರಿಸಿ ಗ್ರಾಮ ಪಂಚಾಯತಿಯಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮೇ.25 ರಂದು ಪ್ರಕಟಿಸುತ್ತದೆ. ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆಗಳನ್ನು ಜೂನ್. 03 ರ ಒಳಗಾಗಿ ಸಲ್ಲಿಸಬೇಕು. ಜಿಲ್ಲಾ ಮಟ್ಟದ ಸಮಿತಿಯು ಅಂತಿಮ ಆಯ್ಕೆ ಪಟ್ಟಿಯನ್ನು ಜೂನ್ 08 ರಂದು ಪ್ರಕಟಿಸಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ್ ಹೆಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply