Gadag

ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಪ್ಯಾಕೇಜ್ ದರ  ಜಾರಿ


ಗದಗ  ಮೇ 7:  ಕೋವಿಡ್-19 ಒಂದು ಸಾಂಕ್ರಾಮಿಕ ರೋಗವೆಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಸೋಂಕಿನ ಏರುಮುಖ ಕಾಣಿಸುತ್ತಿದೆ. ಈ ರೀತಿ ಸೋಂಕಿಗೆ ಒಳಗಾದವರ ಚಿಕಿತ್ಸೆಯನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳ ಸಹಾಯದಿಂದ ನಡೆಸಲಾಗುತ್ತದೆ.
ಸಾರ್ವಜನಿಕ ಆರೋಗ್ಯ ಸಂಸ್ಥೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದಿಂದ ಸೂಚಿತ ಮಾಡಿದ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಖಾಸಗಿ ಆರೋಗ್ಯ ಸೇವೆಗೆ ನೀಡುತ್ತಿರುವ ಪ್ಯಾಕೇಜ್ ದರಗಳನ್ನು ಪರಿಷ್ಕರಿಸಿ ಆದೇಶಿಸಲಾಗಿದೆ.  ಯಾವುದೇ ಖಾಸಗಿ ಆಸ್ಪತ್ರೆಗಳು ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ಪಡೆದಿದ್ದು ಸಾಬೀತಾಗಿದ್ದಲ್ಲಿ ಕೆಪಿಎಮ್‌ಇ ಕಾಯ್ದೆ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಕೆಪಿಎಮ್‌ಇ ಪ್ರಾಧಿಕಾರದ ಅಧಿಕಾರಿಗಳು ಅನಿರೀಕ್ಷಿತ ಬೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಲಾಗುವುದು. ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಪಿಪಿಇ ಹಾಗೂ ಪರಿಕರಗಳನ್ನು ಒಳಗೊಂಡAತೆ ಸೂಚಿಸಿರುವ ದರಗಳು ಈ ಕೆಳಕಂಡAತಿವೆ. ಸಾರ್ವಜನಿಕ ಆರೋಗ್ಯ ಪ್ರಾಧಿಕಾರದಿಂದ ಶಿಫಾರಸ್ಸು ಆಗಿರುವ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ದಿನವೊಂದಕ್ಕೆ ಈ ಕೆಳಕಂಡ ಪ್ಯಾಕೇಜ್ ದರಗಳು ಅಧಿಸೂಚನೆಯ ದಿನಾಂಕದಿAದ ಜಾರಿಗೊಳ್ಳುತ್ತವೆ.
ಜನರಲ್ ವಾರ್ಡ್- ರೂ. 5200/- ; ಹೆಚ್‌ಡಿಯು- ರೂ. 8000 ; ಐಸೋಲೇಷನ್ ಐಸಿಯು ವೆೆಂಟಿಲೇಟರ್ ರಹಿತ- ರೂ. 9750/-;  ಐಸೋಲೇಷನ್ ಐಸಿಯು ವೆಂಟಿಲೇಟರ್ ಸಹಿತ- ರೂ. 11500/- ರೂ. ನಿಗದಿಪಡಿಸಿದೆ. ಈ ಆದೇಶವನ್ನು ಪಾಲಿಸದೇ ಇದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ (51-60) ಮತ್ತು ಭಾರತೀಯ ದಂಡ ಸಂಹಿತೆಯ ಸಂಬAಧಿತ ವಿಭಾಗಗಳ ಅಡಿಯಲ್ಲಿ ಶಿಕ್ಷಾರ್ಹವಾಗಿರುತ್ತದೆ.  ಇದಲ್ಲದೇ ಸಂಬAಧಪಟ್ಟ  ಭಾರತೀಯ ದಂಡನಾ ಕಾಯ್ದೆಯ ಸೂಕ್ತ ಸೆಕ್ಷನ್‌ಗಳಡಿಯಲ್ಲಿ ಶಿಕ್ಷಾರ್ಹವಾಗಿರುತ್ತದೆ ಮತ್ತು ಇತರೆ ಕಾನೂನುಗಳು ಅನ್ವಯಿಸುತ್ತವೆ  ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply