karanatakaState

ಹುಬ್ಬಳ್ಳಿ: ನಿಯಂತ್ರಣ ತಪ್ಪಿ ಬೈಕ್ ಸ್ಕೀಡ್ ಓರ್ವ ಸ್ಥಳದಲ್ಲಿಯೇ ಸಾವು- ಇನ್ನೋರ್ವನ ಸ್ಥಿತಿ ಗಂಭೀರ


ಹುಬ್ಬಳ್ಳಿ: ನಿಯಂತ್ರಣ ತಪ್ಪಿದ ಪರಿಣಾಮ ಬೈಕ್ ಸ್ಕೀಡ್ ಆಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿ ಹೊಸ ಸಿದ್ದೇಶ್ವರ ದೇವಸ್ಥಾನದ ಎದುರು ನಡೆದಿದೆ.

ಧಾರವಾಡದಿಂದ ವೇಗವಾಗಿ ಬರುತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ.
ಅಪಘಾತ ರಭಸಕ್ಕೆ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದರೇ, ಇನ್ನೋರ್ವನಿಗೆ ಗಂಭೀರವಾದ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸಾವನ್ನಪ್ಪಿದ ಯುವಕ ಹಾಗೂ ಗಾಯಾಳುವಿನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Leave a Reply