National

ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಲು ಪಾಸಿಟಿವ್ ವರದಿ ಕಡ್ಡಾಯವಲ್ಲ, ನೂತನ ನಿಯಮ ಜಾರಿ


ನವದೆಹಲಿ: ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಲು ಪಾಸಿಟಿವ್ ವರದಿ ಕಡ್ಡಾಯವಲ್ಲ. ಕೊರೋನಾ ಲಕ್ಷಣಗಳು ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಕೊರೋನಾ ರೋಗಿಗಳು ಕೋವಿಡ್ ಕೇಂದ್ರಗಳಿಗೆ ದಾಖಲಾಗುವ ಸಂಬಂಧ ಇರುವ ರಾಷ್ಟ್ರೀಯ ನೀತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಪರಿಷ್ಕರಿಸಿದೆ. ಈ ಹೊಸ ನೀತಿಯ ಅನ್ವಯ ಕೋವಿಡ್ 19ಗೆ ಸಂಬಂಧಪಟ್ಟ ಯಾವುದೇ ಆರೋಗ್ಯ ಕೇಂದ್ರಗಳಿಗೆ ಪ್ರವೇಶ ಪಡೆಯಲು ಕೋವಿಡ್ ಪಾಸಿಟಿವ್ ವರದಿ ಕಡ್ಡಾಯವಲ್ಲ ಎಂದು ತಿಳಿಸಲಾಗಿದೆ.

ಇನ್ನು ಸ್ಥಳೀಯರಿಗೆ ಮಾತ್ರ ಚಿಕಿತ್ಸೆ ಕೊಡುತ್ತೇವೆ. ಬೇರೆ ನಗರ, ಜಿಲ್ಲೆಗಳವರಿಗೆ ಚಿಕಿತ್ಸೆ ಕೊಡುವುದಿಲ್ಲ ಎಂದು ಹೇಳುವಂತಿಲ್ಲ. ಇಷ್ಟು ದಿನ ಆಯಾ ಕೇಂದ್ರಗಳಿಗೆ ನಿಗದಿ ಮಾಡಿದ್ದ ವ್ಯಾಪ್ತಿ ಇನ್ನು ಮುಂದೆ ಅನ್ವಯವಾಗುವುದಿಲ್ಲ ಎಂದು ಪರಿಷ್ಕರಣ ರಾಷ್ಟ್ರೀಯ ನೀತಿಯಲ್ಲಿ ಉಲ್ಲೇಖವಾಗಿದೆ.


Leave a Reply