karanatakaState

ನಾಳೆಯಿಂದ 18-44 ವರ್ಷದವರಿಗೆ ಕೋವಿಡ್ ಲಸಿಕೆ


ಬೆಂಗಳೂರು: ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಮೇ 10 ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷದವರಿಗೆ ಕೋವಿಡ್ ಲಸಿಕೆ ವಿತರಿಸಲಾಗುವುದು.

ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ 18-44 ವಯೋಮಾನದವರಿಗೆ ಲಸಿಕೆ ನೀಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದರು.

18-44 ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲಾ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗುವುದು. ಕೋವಿಡ್ ಅಥವಾ ಆರೋಗ್ಯ ಸೇತು ಆಯಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕೆ ಕೇಂದ್ರಕ್ಕೆ ಬರುವವರಿಗೆ ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

 


Leave a Reply