karanataka

ಕೋವಿಡ್ ಸೋಂಕಿನಿಂದ ತುಮಕೂರ ವಾರ್ತಾಧಿಕಾರಿ ಮಂಜುನಾಥ್ ನಿಧನ : ವಾರ್ತಾ ಸಚಿವರ ಸಂತಾಪ


ಗದಗ .09 : ತುಮಕೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಿ. ಮಂಜುನಾಥ ಅವರು ರವಿವಾರ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು, ಅವರ ನಿಧನಕ್ಕೆ ವಾರ್ತಾ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರಾದ ಡಿ ಮಂಜುನಾಥ (42) ಅವರಿಗೆ ಇತ್ತೀಚೆಗೆ ಸೋಂಕು ದೃಢ ಪಟ್ಟಿತ್ತು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ರವಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರಿಣಿಸಲಿ ಎಂದು ವಾರ್ತಾ ಸಚಿವ ಸಿ.ಸಿ.ಪಾಟೀಲ ಅವರು ತಿಳಿಸಿದ್ದಾರೆ.


Leave a Reply