karanataka

ಇಂದಿನಿಂದ ಲಾಕ್ ಡೌನ್ : ಹೊಸ ಮಾರ್ಗಸೂಚಿಗಳು


  • ಈಗಾಗಲೇ ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು ಸಂಚರಿಸಲಿವೆ.
  • ಟ್ಯಾಕ್ಸಿ ಮತ್ತು ಆಟೋ ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಸಂಚರಿಸಲು ಅವಕಾಶವಿದೆ.
  • ಶಾಲೆ, ಕಾಲೇಜುಗಳು, ಶಿಕ್ಷಣ/ ಕೋಚಿಂಗ್ ಸಂಸ್ಥೆಗಳ ತರಗತಿಗಳು ನಡೆಯುವುದಿಲ್ಲ.
  • ಹೋಟೆಲ್ ಗಳು, ರೆಸ್ಟೋರೆಂಟ್ ಗಳು ಮತ್ತು ಆಹಾರ ಮಳಿಗೆಗಳು ಪಾರ್ಸೆಲ್ ಹಾಗೂ ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು.
  • ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯ ನಿರ್ವಹಿಸಲಿವೆ.
  • ಎಲ್ಲ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗಳಿಗೆ ಅವಕಾಶ ನೀಡಲಾಗುವುದು.
  • ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗುವುದು.
  • ಆಹಾರ ಸಾಮಗ್ರಿ, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ತೆರೆಯಲು ಅನುಮತಿಸಿದೆ.
  • ಹಾಲಿನ ಬೂತ್ಗಳು ಹಾಗೂ ತಳ್ಳುಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶವಿದೆ.
  • ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ.
  • ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ.
  • ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ
  • ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ.
  • ಐಟಿ ಮತ್ತು ಐಟಿಇಎಸ್ ಕಂಪೆನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದ್ದು, ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.
  • ಸ್ಥಳದಲ್ಲಿಯೇ ಕಾರ್ಮಿಕರು/ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸಬಹುದು.
  • ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು.
  • ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕಗಳಿಗೆ ಅನುಮತಿ ನೀಡಲಾಗುವುದು.
  • ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆಗಳಿಗೆ ಹಾಗೂ ರಸ್ತೆ ಕಾಮಗಾರಿಗಳಿಗೆ ಅನುಮತಿ ನೀಡಲಾಗುವುದು.
  • ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ.
  • ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಅವಕಾಶ.
  • ಈ ಅವಧಿಯಲ್ಲಿ ಬಸ್, ಮೆಟ್ರೋ ರೈಲು ಸಂಚಾರ ಇರುವುದಿಲ್ಲ.
  • ಸಿನೆಮಾ ಹಾಲ್ ಗಳು, ಶಾಪಿಂಗ್ ಮಾಲ್ ಗಳು, ಜಿಮ್ನೇಸಿಯಂಗಳು, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ, ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್ ಗಳು, ಕ್ಲಬ್ ಗಳು, ಥಿಯೇಟರ್ ಗಳು, ಬಾರ್ ಗಳು ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.
  • ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ.
  • ಎಲ್ಲ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
  • ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ.
  • ಸರ್ಕಾರಿ ಹಾಗೂ ಖಾಸಗಿ ಬಸ್ ಗಳು ಹಾಗೂ ಇತರ ಪ್ರಯಾಣಿಕರ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

Leave a Reply