Belagavi

ಕೋವಿಡ್  ಪರಿಶೀಲನಾ ಸಭೆ ನೆಡೆಸಿದ ನೂತನ ಸಂಸದೆ ಮಂಗಲಾ ಅಂಗಡಿ


ಸವದತ್ತಿ: ಸ್ಥಳೀಯ  ಸವದತ್ತಿ ತಾಲೂಕ ಪಂಚಾಯತ್ ಸಭಾ ಭವನದಲ್ಲಿ ಕೋವಿಡ್ -19ಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆಯಲ್ಲಿ ತಾಲೂಕಿನ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಆಕ್ಸಿಜನ್, ಬೆಡ್,ಒ ಅಗತ್ಯ ವೈದ್ಯಕೀಯ ಸೌಕರ್ಯಗಳು ಹಾಗೂ ಸವದತ್ತಿ ತಾಲೂಕಿನಲ್ಲಿ ಜನರ ಸುರಕ್ಷತೆಗಾಗಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸಲಹೆ ಸೂಚನೆಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ವಿಧಾನ ಸಭಾ ಉಪಸಭಾಧ್ಯಕ್ಷರಾದ ಆನಂದ ಮಾಮನಿ, ತಾ.ಪಂ. ಅಧ್ಯಕ್ಷರಾದ ಶ್ರೀ ವಿನಯ್ ದೇಸಾಯಿ, ಬೈಲಹೊಂಗಲ ಉಪವಿಭಾಗಾಧಿಕಾರಿ ಶ್ರೀ ಶಶಿಧರ ಬಗಲಿ, ಸವದತ್ತಿ ತಹಶಿಲ್ದಾರ ಶ್ರೀ ಪ್ರಶಾಂತ್ ಪಾಟೀಲ್, ತಾಲೂಕು ವೈದ್ಯಾಧಿಕಾರಿ ಡಾ. ಮಹೇಶ್ ಚಿತ್ತರಗಿ, ಸಿಪಿಐ ಮಂಜುನಾಥ ನಡುವಿನಮನಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಯಶವಂತ ಕುಮಾರ್ ಹಾಗೂ ಎಲ್ಲ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply