Belagavi

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ


ಬೆಳಗಾವಿ: ಕೋವಿಡ್-19 ಹಿನ್ನಲೆಯಲ್ಲಿ ಎಲ್ಲಾ ಜಯಂತಿಗಳಂತೆ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಬೆಳಗಾವಿಯ ಬಸವರಾಜ ಕಟ್ಟಿಮನಿ ಸಭಾಂಗಣದಲ್ಲಿ ಸೋಮವಾರ (ಮೇ.10) ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಅವರು ಹೇಮರೆಡ್ಡಿ ಮಲ್ಲಮ್ಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಇಲಾಖೆಯ ಸಿಬ್ಬಂದಿ ವಿನೋದ್ ಸುಣಗಾರ, ಸಂತೋಷ್ ಚವ್ವಾಣ, ಕೆಂಚಪ್ಪ ಮುರಗೊಡಿ, ವಸಂತ್ ಪಕ್ಕೇದ, ಮೆಹಬೂಬಿ ಮತ್ತಿತರರು ಉಪಸ್ಥಿತರಿದ್ದರು.


Leave a Reply