NationalNew Delhi

ದೇಶದಲ್ಲಿ ಸ್ವಲ್ಪ ಮಟ್ಟಿಗೆ ಇಳಿಮುಖಗೊಂಡ ಸೋಂಕಿತರ ಸಂಖ್ಯೆ

India map with covid-19 virus concept. Coronavirus is spread to all over the world and infected to all countries. Vector illustration of red map design with influenza virus. Covid 19 India map.

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತಿದ್ದು ಇದರಿಂದ ಕೊಚ್ ರಿಲ್ಯಾಕ್ಸ್ ಸಿಕ್ಕಂತಾಗಿದೆ.  ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 3,29,942 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 3,29,942 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,26,62,575 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೊರೊನಾ ಸೋಂಕಿಗೆ 3,876 ಮಂದಿ ಸಾವನ್ನಪ್ಪಿದ್ದು, ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,49,992 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,56,082 ಮಂದಿ ಕೊರೊನಾ ಸೊಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಪೈಕಿ 1,90,27,304 ಸೋಂಕಿತರು ಗುಣಮುಖರಾಗಿ ಅಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 37,15,221 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

 


Leave a Reply