Bengalurukaranataka

ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ, ಉಚಿತ ಉಪಹಾರ ಮತ್ತು ಊಟದ ವ್ಯವಸ್ಥೆ


ಬೆಂಗಳೂರು : ಕೊರೋನಾ ನಿಯಂತ್ರಣ ಮಾಡಲು ಮತ್ತು ಕೋವಿಡ್ ಚೈನ್ ಕಳಚುವಂತೆ ಮಾಡಲು ಮೇ.10 ರಿಂದ 24ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಈ ಅವದಿಯಲ್ಲಿ ದುರ್ಬಲ ವರ್ಗದವರಿಗೆ ಅನುಕೂಲವಾಗುವಂತೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಒದಗಿಸುವಂತೆ ಪೌರಾಡಳಿತ ನಿರ್ದೇಶನಾಲಯ ಆದೇಶ ಹೊರಡಿಸಿದೆ.

ಈ ಕುರಿತು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ದಿನಾಂಕ 10-05-2021 ರಿಂದ 24-05-2021ರವರೆಗೆ ಕೋವಿಡ್ 19 ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಿ ಆದೇಶಿಸಲಾಗಿದೆ ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ವಲಸಿಗರು, ದುರ್ಬಲ ವರ್ಗದವರಿಗೆ ಅನಾನುಕೂಲವಾಗದಂತೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಒದಗಿಸುವಂತೆ ನಿರ್ದೇಶಿಸಲಾಗಿದೆ.

ಮೇ 34ರವರೆಗೆ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ(ಬಿಬಿಎಂಪಿ ಹೊರತುಪಡಿಸಿ) ಇಂದಿರಾ ಕ್ಯಾಟೀನ್ ಗಳಲ್ಲಿ ಪ್ರಚಲಿತ ಮಾರ್ಗಸೂಚಿಗಳನ್ವಯ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಒದಗಿಸಲು ಅಗತ್ಯ ಕ್ರಮವಹಿಸಲು ನಿರ್ದೇಶಿಸಿದೆ.


Leave a Reply