Gadag

ಮಹದೇವ ಪ್ರಕಾಶ್ ನಿಧನ : ವಾರ್ತಾ ಸಚಿವ ಸಿ.ಸಿ. ಪಾಟೀಲ ಸಂತಾಪ


ಗದಗ  ಮೇ.14 : ರಾಜಕೀಯ ವಿಶ್ಲೇಷಕ, ಹಿರಿಯ ಪತ್ರಕರ್ತರ ಮಹದೇವ ಪ್ರಕಾಶ್ ಅವರ ನಿಧನಕ್ಕೆ ಸಣ್ಣ ಕೈಗಾರಿಕೆ, ವಾರ್ತಾ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದ ಅನುಭವ ಹೊಂದಿದ್ದ ಮಹಾದೇವ್ ಪ್ರಕಾಶ್ ಅವರ ಅಕಾಲಿಕ ನಿಧನ ನೋವು ತಂದಿದೆ. ಭಗವಂತ ಮೃತರ ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply