karwar uttar kannada

ತೌಕ್ತೆ ಚಂಡಮಾರುತದಿಂದ ಹಾನಿ ಪ್ರದೇಶಗಳಿಗೆ ಸಚಿವರಾದ ಶಿವರಾಮ ಹೆಬ್ಬಾರ್, ಆರ್.ಆಶೋಕ ಭೇಟಿ


ಭಟ್ಕಳ : ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಕಂದಾಯ ಸಚಿವರಾದ ಶ್ರೀ ಆರ್.ಆಶೋಕ ಅವರೊಂದಿಗೆ ಭೇಟಿ

ನೀಡಿ ಹಾನಿಗೊಳಗಾದ ಮನೆ, ಬೋಟ್ ಹಾಗೂ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿ, ಹಾನಿಗೊಳಗಾದವರ ಪಟ್ಟಿಯನ್ನು ಶೀಘ್ರವಾಗಿ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ತೌಕ್ತೆ ಚಂಡಮಾರುತದ ಅವಘಡದಿಂದ ಮೃತರಾದ ತಾಲೂಕಿನ ಲಕ್ಷ್ಮಣ ಈರಪ್ಪ ನಾಯ್ಕ ಅವರ ಕುಟುಂಬದವರಿಗೆ ಸುಮಾರು 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಧನದ ಪ್ರತಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಸುನೀಲ್ ನಾಯ್ಕ, ಶ್ರೀ ದಿನಕರ ಕೆ ಶೆಟ್ಟಿ, ಶ್ರೀಮತಿ ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ ನಾಯಕ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು,ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply