karwar uttar kannada

ಭಟ್ಕಳ ಹಾನಿ ಪ್ರದೇಶಕ್ಕೆ ಸಚಿವ ಆರ್ ಅಶೋಕ್ , ಶಾಸಕಿ ರೂಪಾಲಿ ನಾಯ್ಕ್ ಭೇಟಿ


ಭಟ್ಕಳ ತಾಲ್ಲೂಕಿನಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಯಾದ ಪ್ರದೇಶಕ್ಕೆ ಕಂದಾಯ ಸಚಿವರಾದ ಶ್ರೀ ಆರ್. ಅಶೋಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಭೇಟಿ ನೀಡಿ ಸಭೆಯಲ್ಲಿಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ *ಶ್ರೀಮತಿ ರೂಪಾಲಿ ಎಸ್ ನಾಯ್ಕ* ಪಾಲ್ಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ತೌಕ್ತೆ ಚಂಡಮಾರುತದಿಂದ ಅಪಾರ ಹಾನಿಯಾಗಿರುವ ವಿವರವನ್ನು ಸಚಿವರಿಗೆ ನೀಡಲಾಯಿತು. ಅಲ್ಲದೇ, ಕಾರವಾರ ಮತ್ತು ಅಂಕೋಲಾ ತಾಲ್ಲೂಕಿನಲ್ಲಿ ಕಡಲ ಕೊರೆತ ಪ್ರತಿಬಂಧಕ ನಿರ್ಮಾಣ ಕಾಮಗಾರಿ ಅವಶ್ಯಕವಾಗಿದೆ. ಸಮುದ್ರದ ನೀರು ಮನೆಗಳಿಗೆ ನುಗ್ಗಿ ಹಾನಿಯಾಗಿರುವ ಬಗ್ಗೆ ಮಾಹಿತಿ ನೀಡಲಾಯಿತು.

ಸಮುದ್ರದ ಅಲೆಯ ಹೊಡೆತಕ್ಕೆ ದೋಣಿಗೆ ಹಾನಿಯಾದ ವಿವರ, ಬಲೆ ಹಾನಿ, ತೊಟಗಾರಿಕಾ ಬೆಳೆ ಹಾನಿ ವಿವರ ಮತ್ತು ಮನೆಗಳಿಗೆ ಹಾನಿಯಾದ ವಿವರವನ್ನು ನೀಡಲಾಯಿತು. ಅಲ್ಲದೇ, ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಬೇಕು ಎಂದು ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಉತ್ತರಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ ನಾಯ್ಕ, ಭಟ್ಕಳ-ಹೊನ್ನಾವರ ಶಾಸಕರಾದ ಶ್ರೀ ಸುನಿಲ್ ನಾಯ್ಕ, ಕುಮಟಾ-ಹೊನ್ನಾವರ ಶಾಸಕರಾದ ಶ್ರೀ ದಿನಕರ ಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಬಂದರು ಇಲಾಖೆ ಅಧಿಕಾರಿಗಳು, ತಹಶೀಲ್ದಾರ, ಮುಖಂಡರು ಉಪಸ್ಥಿತರಿದ್ದರು.


Leave a Reply