karwar uttar kannada

ವಿಶೇಷ ಕಂಟೈನ್ ಮೆಂಟ್ ಜೋನ್


ಕಾರವಾರ – ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆಯ ಅಪಾಯವನ್ನು ತಪ್ಪಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ ಸಹ ಅಲ್ಲಲ್ಲಿ ಗುಂಪು ಗುಂಪಾಗಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವುದರಿಂದ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಉಪ ವಿಭಾಗದ ವ್ಯಾಪ್ತಿಯ ಹಳಿಯಾಳ ತಾಲೂಕಿನ ಪಟ್ಟಣ ಪ್ರದೇಶದಲ್ಲಿ ಮತ್ತು ಮಂಗಳವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ದಿನಾಂಕ:19-05-2021ರಿಂದ ಜ್ಯಾರಿಗೆ ಬರುವಂತೆ ದಿನಾಂಕ:30-05-2021 ರ ವರೆಗೆ ಕಾರವಾರ ಉಪ ವಿಭಾಗದ ದಂಡಾಧಿಕಾರಿಗಳಾದ ವಿದ್ಯಾಶ್ರೀ ಚಂದರಗಿ ರವರು ವಿಪತ್ತು ನಿರ್ವಹಣಾ ಕಾಯ್ದೆ-2005 ರಡಿ ವಿಶೇಷ ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಿರುತ್ತಾರೆ. .
ಸದರಿ ಕಂಟೈನ್ ಮೆಂಟ್ ಜೋನ್ ಗಳಲ್ಲಿ ಸೋಂಕು ಹರಡದಂತೆ ಕಟ್ಟುನಿಟ್ಟಿನ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಅಗತ್ಯ ವಸ್ತುಗಳ ಪೂರೈಕೆಗೆ ತಹಶೀಲ್ದಾರ್ / ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸೂಕ್ತ ವ್ಯವಸ್ಥೆ ಮಾಡುವ ಕುರಿತು ಆದೇಶಿರುತ್ತಾರೆ.
ವಿಶೇಷ ಕಂಟೈನ್ ಮೆಂಟ್ ಜೋನ್ ನಲ್ಲಿ ವೈದ್ಯಕೀಯ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಇತರೆ ಯಾವುದೇ ಖಾಸಗಿ ವಾಹನ ಮತ್ತು ನಾಗರೀಕರ ಸಂಚಾರವನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮುಗ್ಗಟ್ಟುಗಳ ಮಾಲೀಕರ ವಿರುದ್ಧ ಎಫ್. ಐ ಆರ್ ದಾಖಲಿಸಿ ಅವರು ಹೊಂದಿರುವ ಲೈಸೆನ್ಸ್ ರದ್ದುಪಡಿಸಲಾಗುವುದಲ್ಲದೆ ವಿಪತ್ತು ನಿರ್ವಹಣಾ ಕಾಯ್ದೆ-2005 ರಡಿ ಕಾನೂನು ಕ್ರಮ ಜರುಗಿಸುವುದಾಗಿ ಕಟ್ಟು ನಿಟ್ಟಿನ ಎಚ್ಚರಿಕೆ ನೀಡಲಾಗಿದೆ.


Leave a Reply