karanataka

ಡಿಸಿಎಂ ಲಕ್ಷ್ಮಣ ಸವದಿ ಅವರಿಂದ ಆಕ್ಸಿಜನ್ ಬಸ್ ಉದ್ಘಾಟನೆ


ಕೊಪ್ಪಳ, ಮೇ 24 : ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದ ವತಿಯಿಂದ ನೂತನವಾಗಿ ತಯಾರಿಸಲಾದ ಆಕ್ಸಿಜನ್ ಬಸ್ಸನ್ನು ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಇಂದು ರಿಬ್ಬನ್ ಕತ್ತರಿಸುವುದರ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಕೆ.ಎಸ್.ಆರ್.ಟಿ.ಸಿ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ. ಮುಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply