Belagavi

ಪತ್ರಕರ್ತರಿಗೂ ವಿಶೇಷ ಪ್ಯಾಕೇಜ್ ಘೋಷಿಸಿ: ಡಾ: ಶಿವಕುಮಾರ್ ಶ್ರೀ


ಗದಗ : ರಾಜ್ಯ ಸರ್ಕಾರವು ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ವಿವಿಧ ಶ್ರಮಿಕ ವರ್ಗದವರಿಗೆ ಹಾಗೂ ಕೊರೊನಾ ವಾರಿಯರ್ಸ್‌ಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ, ಜನರಿಗೆ ಹಗಲಿರುಳು ದುಡಿದು ಸುದ್ದಿ ಮುಟ್ಟಿಸುತ್ತಿರುವ ಮಾಧ್ಯಮದವರಿಗೆ ಪ್ಯಾಕೇಜ್‌ನಲ್ಲಿ ಏನೂ ಘೋಷಿಸಿಲ್ಲ.

ಹೀಗಾಗಿ ಅವರಿಗೆ ಪ್ಯಾಕೇಜ್ ಘೋಷಿಸಬೇಕು ಎಂದು ಸಿದ್ದನಕೊಳ್ಳ ನಿರತಂರ ದಾಸೋಹ ಮಠದ ಡಾ: ಶಿವಕುಮಾರ ಸ್ವಾಮೀಜಿ ಆಗ್ರಹಿಸಿದ್ದಾರೆ.

ಮಾಧ್ಯಮ ಸಿಬ್ಬಂದಿ ತಮ್ಮ ಕುಟುಂಬವನ್ನು ಲೆಕ್ಕಿಸದೆ ಈ ಕೋವಿಡ್ ಕಾರ್ಯದಲ್ಲಿ ಜಾಗೃತಿ ಮೂಡಿಸುತ್ತ ಹಗಲಿರುಳು ಮುಂಚೂಣಿ ಕಾರ್ಯದಲ್ಲಿ ತೊಡಗಿದ್ದಾರೆ.
ಆದರೆ ಇಂತಹ ಮಾಧ್ಯಮದ ಪತ್ರಕರ್ತರ ಬಗ್ಗೆ ಸರ್ಕಾರ ನಿಷ್ಕಾಳಜಿ ವಹಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವದ ಒಂದು ಅಂಗವಾಗಿರುವ ಮಾಧ್ಯಮದ ಸಿಬ್ಬಂದಿಯನ್ನು ಪ್ಯಾಕೇಜ್ ಘೋಷಿಸುವಲ್ಲಿ ಸರ್ಕಾರ ಮರೆತಿದ್ದು, ಕೂಡಲೇ ರಾಜ್ಯದ ಮುಖ್ಯಮಂತ್ರಿ, ಅವರಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.
(ವರದಿ ಈರಣ್ಣಾ ಹುಲ್ಲೂರ)


Leave a Reply