Belagavi

ಧ್ವನಿವರ್ಧಕ ಮೂಲಕ ಹಂಚಿನಾಳದಲ್ಲಿ ಕೊರೊನಾ ಜಾಗೃತಿ


ಸವದತ್ತಿ : ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಕೊರೊನಾ ಜಾಗೃತಿ ಮೂಡಿಸಲಾಯಿತು.

ಎಲ್ಲೆಡೆ ಕೊರೊನಾ ಆರ್ಭಟಿಸುತ್ತಿದ್ದು ತಾಲೂಕಿನ ಹಂಚಿನಾಳದಲ್ಲೂ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರುತಲಿದೆ ಇದನ್ನು ತಡೆಯುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಗುರುವಾರ ಧ್ವನಿವರ್ಧಕ ಮೂಲಕ ಬೀದಿ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಯಿತು.

ಜೊತೆಗೆ ಬಿಸಿ ನೀರಿನಲ್ಲಿ ನಿಂಬೆ ರಸ ಬಳಕೆ, ಅಲ್ಲಾ, ಕರಿ ಮೆನಸು, ಶುಂಠಿ, ಬೆಲ್ಲದ ಕಷಾಯ ಇವೆಲ್ಲವನ್ನು ಅಹಾರ ಪದ್ದತಿಯಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ಅವುಗಳ ಬಳಕೆ ಹೆಚ್ಚು ಮಾಡಬೇಕೆಂದು ಸಲಹೆ ನೀಡಿದರು.

ಈಗಾಗಲೇ ಕಲಂ 144 ಜಾರಿಯಾಗಿದ್ದು ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡುವುದನ್ನು ನಿಲ್ಲಿಸಬೇಕು, ಪ್ರತಿಯೊಬ್ಬರೂ ಮಾಸ್ಕ್ ಧರಿಸುವ ಮೂಲಕ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೊರೊನಾ ವಿರುದ್ಧ ಹೋರಾಡಬೇಕು ಎಂದರು.

ಕೊರೊನಾ ವಿರುದ್ಧದ ಹೋರಾಟಕ್ಕೆ ಪ್ರತಿಯೊಬ್ಬರೂ ಸಹಕರಿಸುವಂತೆ ಗ್ರಾಮ ಪಂಚಾಯತಿ ಮತ್ತು ಆರೋಗ್ಯ ಇಲಾಖೆ ಗ್ರಾಮಸ್ಥರಲ್ಲಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿರೇಕುಂಬಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ಯ ವೈದ್ಯಾಧಿಕಾರಿ ಡಾ.ಕೃಷ್ಣ ಹನಸಿ, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಚಿಟ್ಟೀಸ್ ಗ್ರಾಮ ಪಂಚಾಯತಿ ಅಧ್ಯಕ್ಷ ಹುಸೇನಸಾಬ್ ಕೊಣ್ಣೂರ, ಸದಸ್ಯ ವಿಜಯ ಗಂಗಲ, ಆಶಾ ಕಾರ್ಯಕರ್ತೆಯರು ಇದ್ದರು.
(ವರದಿ ಈರಣ್ಣಾ ಹುಲ್ಲೂರ ಯರಗಟ್ಟಿ)


Leave a Reply