Belagavi

ಕ್ಷೇತ್ರಾದ್ಯಂತ ವ್ಯಾಕ್ಸಿನೇಶನ್, ಕೋವಿಡ್ ಟೆಸ್ಟಿಂಗ್ ವ್ಯವಸ್ಥೆ ಪರಿಶೀಲಿಸುತ್ತಿರುವ ಲಕ್ಷಿ÷್ಮ ಹೆಬ್ಬಾಳಕರ್


ಬೆಳಗಾವಿ- ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲ ಕಡೆ ಓಡಾಡಿ ವ್ಯಾಕ್ಸಿನೇಶನ್ ಮತ್ತು ಕೋವಿಡ್ ಟೆಸ್ಟಿಂಗ್ ವ್ಯವಸ್ಥೆಯನ್ನು ಪರಿಶೀಲಿಸುತ್ತಿರುವ ಶಾಸಕಿ ಲಕ್ಷಿ÷್ಮ ಹೆಬ್ಬಾಳಕರ್, ಯಾವುದೇ ರೀತಿಯ ಅವ್ಯವಸ್ಥೆಯಾಗದಂತೆ £ಗಾ ವಹಿಸುತ್ತಿದ್ದಾರೆ.
ಶುಕ್ರವಾರ ಕ್ಷೇತ್ರದ ಹಿಂಡಲಗಾ ಗ್ರಾಮದ ವ್ಯಾಕ್ಸಿನೇಷನ್ (ಕೋವಿಡ್ ಲಸಿಕೆ) £Ãಡುವ ಕೇಂದ್ರಕ್ಕೆ ಭೇಟಿ £Ãಡಿ ಲಸಿಕೆಗಳ ಪೂರೈಕೆಯ ಬಗ್ಗೆ ಪರಿಶೀಲಿಸಿದರು. ಯಾರೂ ಹೆದರದೆ ಲಸಿಕೆಗಳನ್ನು ಪಡೆಯಬೇಕು. ಅರ್ಹ ನಾಗರಿಕರೆಲ್ಲರು ಲಸಿಕೆಯ ಸದುಪಯೋಗ ಪಡೆದುಕೊಂಡು ಮಹಾಮಾರಿ ಕೊರೋನಾವನ್ನು ತಡೆಗಟ್ಟಬೇಕಿದೆ, ಹೆಚ್ಚಿನ ಪ್ರಮಾಣದಲ್ಲಿ ಜನರು ಕೋವಿಡ್ ಲಸಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ವಿನಂತಿಸಿದರು.
ಕ್ಷೇತ್ರದಲ್ಲಿ ಯಾವುದೇ ವೈದ್ಯಕೀಯ ಸೌಲಭ್ಯದ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಹಾಗೂ ಕ್ಷೇತ್ರದ ಎಲ್ಲ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆಗಳ £Ãಡುವಿಕೆ ಹಾಗೂ ಮನೆ ಮನೆಗಳಿಗೆ ತೆರಳಿ ಗಂಟಲು ದ್ರವಗಳ ಮಾದರಿಯನ್ನು ಸಂಗ್ರಹಿಸುವ ಕುರಿತು ಆಯಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಲ್ಲಿ ಕೋರಲಾಗಿದೆ. ಈ ಸಂಬAಧ ತಾಲೂಕಾ ಆರೋಗ್ಯಾಧಿಕಾರಿಗಳ ಹಾಗೂ ತಹಸಿಲ್ದಾರರ ಜೊತೆ ಮಾತನಾಡಿದ್ದೇನೆ ಎಂದು ಹೆಬ್ಬಾಳಕರ್ ತಿಳಿಸಿದರು.
ಕೊರೋನಾ ಅಟ್ಟಹಾಸದ ಸಂದರ್ಭದಲ್ಲಿ ಜೀವದ ಹಂಗನ್ನು ತೊರೆದು ಕೋವಿಡ್ £ರ್ವಹಣೆಯಲ್ಲಿ ತೊಡಗಿರುವ ವೈದ್ಯಕೀಯ ಸಿಬ್ಬಂದಿಗೆ, ಮುಂಚೂಣಿ ಕಾರ್ಯಕರ್ತರಿಗೆ, ಆಶಾ ಕಾರ್ಯಕರ್ತರಿಗೆ ಶಾಸಕರು ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಸಲ್ಲಿಸಿದರು.
ನಂತರ ಗಣೇಶಪುರದ ಕೋವಿಡ್ ಸ್ವಾ÷್ಯಬ್ (ಗಂಟಲು ದ್ರವಗಳ) ಸಂಗ್ರಹ ಕೇಂದ್ರಕ್ಕೆ ಭೇಟಿ £Ãಡಿದ ಶಾಸಕಿ ಲಕ್ಷಿ÷್ಮ ಹೆಬ್ಬಾಳಕರ್, ಕೊರೋನಾ ಲಕ್ಷಣಗಳು ಕಂಡು ಬಂದವರ ಜೊತೆ ಮಾತನಾಡಿ ಧೈರ್ಯವನ್ನು ತುಂಬಿದರು.
ಇನ್ನೂ ಹೆಚ್ಚಿನ ಗಂಟಲು ದ್ರವಗಳ ಮಾದರಿಯನ್ನು ಸಂಗ್ರಹಿಸಲು ಮನೆ ಮನೆಗಳಿಗೆ ತೆರಳಬೇಕು ಎಂದು ಸಂಬAಧಪಟ್ಟವರಿಗೆ ಸೂಚಿಸಿದರು.
ತಾಲೂಕಾ ಆರೋಗ್ಯಾಧಿಕಾರಿ, ತಹಸಿಲ್ದಾರ್, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.


Leave a Reply