Belagavi

ಸವದತ್ತಿ ಸೇವಾ ಹಿ ಸಂಘಟನ್ ಕಾರ್ಯಕ್ರಮ


ಸವದತ್ತಿ: ಸ್ಥಳೀಯ ಸವದತ್ತಿಯ ಪ್ರವಾಸಿ ಮಂದಿರದಲ್ಲಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿ.ಜೆ.ಪಿ ಸರ್ಕಾರ 2ನೇ ಅವಧಿಯ 2 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನಲೆಯಲ್ಲಿ ಸಂಭ್ರಮಾಚರಣೆಯನ್ನು ದೇಶಾದ್ಯಾಂತ ಕೋವಿಡ ಹಿನ್ನಲೆಯ “ಸೇವಾ ಹಿ ಸಂಘಟನ್” ಕಾರ್ಯಕ್ರಮದಡಿಯಲ್ಲಿ ರವಿವಾರದಂದು ಆಯೋಜಿಸಲಾಗಿತ್ತು.

ಸವದತ್ತಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ 5 ಆಕ್ಸಿಜನ್ ಕಾನ್ಸಟ್ರೇಟರ, 1000 ಎನ್-95 ಮಾಸ್ಕಗಳು ಹಾಗೂ ಸೇನಿಟೈಜರಗಳನ್ನು ಮಾನ್ಯ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಶ್ರೀ ಮಹಾಂತೇಶ ಕವಟಗಿಮಠ ಅವರು ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಸಭಾ ಉಪಸಭಾಧ್ಯಕ್ಷ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ, ತಹಶಿಲ್ದಾರ ಪ್ರಶಾಂತ ಪಾಟೀಲ, ತಾಲೂಕಾ ವೈದ್ಯಾಧಿಕಾರಿ ಮಹೇಶ ಚಿತ್ತರಗಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ, ಸಿಪಿಐ ಮಂಜುನಾಥ ನಡವಿನಮನಿ, ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
(ವರದಿ ಈರಣ್ಣಾ ಹುಲ್ಲೂರ)


Leave a Reply