Gadag

ರಾಜ್ಯ, ರಾಷ್ಟç ಹಾಗೂ ಅಂತರರಾಷ್ಟç ಮಟ್ಟದ ಕ್ರೀಡಾಪಟುಗಳ ಗಮನಕ್ಕೆ


ಗದಗ  ಮೇ 31: ಗದಗ ಜಿಲ್ಲೆಯ ರಾಜ್ಯ, ರಾಷ್ಟç ಹಾಗೂ ಅಂತರರಾಷ್ಟç ಮಟ್ಟದ 18 ರಿಂದ 44 ವರ್ಷದೊಳಗಿನ ಕ್ರೀಡಾಪಟುಗಳಿಗೆೆ ಕೋವಿಡ್ ಲಸಿಕೆ ನೀಡಲಾಗುವುದು.  ಅರ್ಹ ಕ್ರೀಡಾಪಟುಗಳು ತಮ್ಮ ಹೆಸರು, ಜನ್ಮದಿನಾಂಕ, ಕ್ರೀಡೆಗಳಲ್ಲಿ ಭಾಗವಹಿಸಿದ ವಿವರ, ಆಧಾರ ಸಂಖ್ಯೆ, ಮೊಬೈಲ್ ದೂರವಾಣಿ ಸಂಖ್ಯೆಯನ್ನು ಒಳಗೊಂಡ ಪೂರ್ಣ ವಿವರವನ್ನು ಜೂನ್ 4ರ ಒಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗ ಇವರಿಗೆ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ  ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08372-238345 ಸಂಪರ್ಕಿಸಬಹುದಾಗಿದೆ.


Leave a Reply