Koppal

ಪಟ್ಟಣದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಕೊರೋನಾ ಲಸಿಕಾ ಕೇಂದ್ರ ಸ್ಥಾಪನೆ


ಕುಷ್ಟಗಿ: ಇತ್ತೀಚಿಗೆ ಕುಷ್ಟಗಿ ನಗರಕ್ಕೆ ಭೇಟಿ ನೀಡಿದ ಸಂಸದ ಸಂಗಣ್ಣ ಕರಡಿ ಹಾಗೂ ಪುರಸಭೆ ಅಧ್ಯಕ್ಷ ಜಿ.ಕೆ ಹಿರೇಮಠ ಸೂಚನೆ ಹಾಗೂ ನಿರ್ದೇಶನದಂತೆ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ಹಾಗೂ ಲಸಿಕಾ ಕೇಂದ್ರ ಒಂದೇ ಕಡೆ ಆಗಿರುವುದರಿಂದ ಸೋಂಕು ಹರಡುವಿಕೆ ಮತ್ತು ನೂಕುನುಗ್ಗಲು ತಪ್ಪಿಸಲು ಸ್ಥಳೀಯ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಕೋವಿಡ್ ಲಸಿಕೆ ವಿತರಣಾ ಕೇಂದ್ರ ಸ್ಥಾಪಿಸಲಾಗಿದೆ.

ಈ ಮೂಲಕ ಸಾರ್ವಜನಿಕರ ಅನುಕೂಲಕ್ಕೆ ತಾಲೂಕು ಆರೋಗ್ಯಾಧಿಕಾರಿ ಆನಂದ ಗೋಟೂರು ಮತ್ತು ವೈದ್ಯಾಧಿಕಾರಿ ಕೆ.ಎಸ್ ರೆಡ್ಡಿಯವರ ಕ್ರಮ ಸೂಚನೆಯ ಮೇರೆಗೆ ಇಲ್ಲಿ ಲಸಿಕೆ ಹಾಕಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಸಿಬ್ಬಂದಿ ಸೋಮಶೇಖರ ಮೇಟಿ ತಿಳಿಸಿದರು.ಇದೇ ಸಂದರ್ಭದಲ್ಲಿ ನಗರದ 18 ವರ್ಷ ವಯಸ್ಸು ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.

ಕೊರೊನಾ ನಿಯಂತ್ರಣಕ್ಕೆ ತಾಲೂಕು ಆರೋಗ್ಯ ಇಲಾಖೆಯೊಂದಿಗೆ ಸಹಕಾರ ನೀಡುವ ಮೂಲಕ ಕೈಜೋಡಿಸಬೇಕೆಂದು ಮತ್ತು ಲಸಿಕಾ ವಿತರಣಾ ಕೇಂದ್ರದ ಸದುಪಯೋಗಪಡಿಸಿಕೊಳ್ಳಬೇಕೆಂದು ವಿನಂತಿಸಿಕೊಂಡರು.

ವರದಿ– ಆರ್ ಶರಣಪ್ಪ ಗುಮಗೇರಾ.


Leave a Reply