Belagavi

ಜ.೧೭ರಂದು ಬೆಳಗಾವಿಗೆ ಅಮಿತ ಶಾ ಆಗಮನ


ಗೋಕಾಕ: ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಜ.೧೭ರಂದು ಮಧ್ಯಾಹ್ನ ೨ ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಅವರು ಈ ಕುರಿತು ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಬೆಳಗಾವಿಯಲ್ಲಿ ಮೊನ್ನೆ ಜರುಗಿದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಅಭೂತಪೂರ್ವ ಜಯಶಾಲಿಯಾಗಿದ್ದ ಹಿನ್ನೆಲೆಯಲ್ಲಿ ಹಾಗೂ ಬೃಹತ್ ಭಾಜಪ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜಿಲ್ಲೆಯ ಎಲ್ಲ ಬಿಜೆಪಿ ಮುಖಂಡರುಗಳು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕು. ಸುಮಾರು ೨ರಿಂದ ೩ ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಈ ಸಭೆಯಲ್ಲಿ ಎಲ್ಲ ಭಾಜಪ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ.


Leave a Reply