Belagavi

ಸ್ಯಾನಿಟೈಸರ್ ಸಿಂಪರಣೆ


ಯರಗಟ್ಟಿ : ರಾಜ್ಯದಲ್ಲಿ ಕೊರೋನಾ ಹಾವಳಿ ಹೆಚ್ಚುತ್ತಿರುವುದರಿಂದ ಕಳೆದ ಎರಡು ದಿನಗಳಿಂದ ಯರಗಟ್ಟಿ ಗ್ರಾಮ ಪಂಚಾಯತಿಯಿಂದ ಸ್ಯಾನಿಟೈಸರ್‌ ಸಿಂಪರಣೆ ಮಾಡಲಾಯಿತು. ಸೋಮವಾರ ಹಾಗೂ ಮಂಗಳವಾರದಂದು

ಯರಗಟ್ಟಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾದ ಮಲ್ಲಪ್ಪ ಹಾರುಗೋಪ್ಪ ತಮ್ಮ ಸಿಬ್ಬಂದಿಯೊಂದಿಗೆ ತಾವು ಕೂಡ ಸ್ಯಾನಿಟೈಸರ್‌ ಸಿಂಪರಣೆ ಮಾಡುವುದರೊಂದಿಗೆ ಸಂಬಂಧಿಸಿದ ಪ್ರದೇಶದಲ್ಲಿ ಕುಡಿಯುವ ನೀರಿನ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವುದರಿಂದ ನಾಗರಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಈಗಾಗಲೇ ಎಲ್ಲ ಚರಂಡಿಗಳನ್ನು ಸ್ವಚ್ಛಗೊಳಿಸಿ ಎಲ್ಲ ಚರಂಡಿಯ ನೀರು ಪಟ್ಟಣದ ಹೊರಹೋಗುವಂತೆ ವ್ಯವಸ್ಥೆ ಮಾಡಲಾಗಿದ್ದರೂ ಈಗಿರುವ ಚರಂಡಿಯ ಕಾಮಗಾರಿ ಹಳೇ ರಾಷ್ಟ್ರೀಯ ಹೆದ್ದಾರಿ ಮಾಡಲಾಗಿರುವ ದೊಡ್ಡ ಚರಂಡಿಗೆ ಈ ನೀರನ್ನು ತಲುಪಿಸಬೇಕಾಗಿದೆ. ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದು ಮಲ್ಲಪ್ಪ ಹಾರುಗೋಪ್ಪ ಹೇಳಿದರು.
(ವರದಿ ಈರಣ್ಣಾ ಹುಲ್ಲೂರ ಯರಗಟ್ಟಿ)


Leave a Reply