karanataka

ಕನ್ನಡ ಚಿತ್ರರಂಗದ ಹಿರಿಯ ಪೋಷಕನಟಿ ಬಿ.ಜಯಾ ವಿಧಿವಶ


ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ನಿಧನರಾಗಿದ್ದಾರೆ. 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಅವರು ಹಾಸ್ಯ ಪಾತ್ರಗಳ ಮೂಲಕ ಗಮನಸೆಳೆದಿದ್ದರು.

ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಬಿ. ಜಯಾ ಸಿನಿಮಾ ಜೊತೆಗೆ ಹಲವಾರು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ. ವರ ನಟ ಡಾ. ರಾಜಕುಮಾರ್ ಅವರ ಹೆಚ್ಚಿನ ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಅವರು ಅಭಿನಯಿಸಿದ್ದಾರೆ.

ಅನೇಕ ದಿಗ್ಗಜರ ಚಿತ್ರಗಳಲ್ಲಿ ಅಭಿನಯಿಸಿದ ಜಯಾ ಅವರು ನಿಧನದ ಹಿನ್ನಲೆಯಲ್ಲಿ ಸ್ಯಾಂಡಲ್ವುಡ್ ಕಂಬನಿ ಮಿಡಿದಿದೆ.ಡಾ.ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಸೇರಿದಂತೆ ಹಲವಾರು ದಿಗ್ಗಜ ನಟರ ಜತೆ ಅಭಿನಯಸಿದ್ದ ಹಿರಿಯ ನಟಿಯನ್ನು ಕನ್ನಡ ಚಿತ್ರರಂಗ ಕಳೆದುಕೊಂಡಿದೆ.
(ವರದಿ ಈರಣ್ಣಾ ಹುಲ್ಲೂರ)


Leave a Reply