Belagavi

ವಿಶ್ವ ಪರಿಸರ ದಿನದಂದು ರಾಮದುರ್ಗದ ತಹಸಿಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ್ ಮರವನ್ನು ಹಚ್ಚುವುದರ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು


ರಾಮದುರ್ಗ: ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೀರ್ ಬಜಾರದಲ್ಲಿ ವಿಶ್ವ ಪರಿಸರ ದಿನವನ್ನು ಮರಗಳನ್ನು ಹಚ್ಚುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಪ್ರತೀ ವರ್ಷವೂ ಜೂ. 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸುತ್ತೇವೆ. ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ ಅದರ ಮಹತ್ವ ಅರಿಯುವ ಮತ್ತು ಇಂದು ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದ ಮಹತ್ವವಾದ ದಿನ ಇದು. ಮಾನವ ಪರಿಸರದ ಶಿಶು.

ಪರಿಸರವಿಲ್ಲದೆ ಮಾನವನ ಜೀವನಕ್ಕೆ ಯಾವುದೇ ಬೆಲೆಯಿರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಿಕೊಳ್ಳುವ ಆವಶ್ಯಕತೆಯಿದೆ.

ಆದರೆ ಪ್ರಸ್ತುತ ಜಗತ್ತಿನಲ್ಲಿ ಮಾನವನು ಅಭಿವೃದ್ಧಿ ಎಂಬ ಹೆಸರಿನಲ್ಲಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ.

ನಾವು ಪರಿಸರವನ್ನು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ ಎಂದು  ಹೇಳಿದರು.

ಇದರಿಂದ ಪ್ರಾಣಿಗಳ ಜೀವ ರಕ್ಷಣೆಗೆ ಹಾನಿಯುಂಟಾಗುತ್ತಿದೆ. ಜಲಮಾಲಿನ್ಯ, ವಾಯುಮಾಲಿನ್ಯ, ಮಣ್ಣಿನ ಮಾಲಿನ್ಯ, ಅರಣ್ಯನಾಶ ಹೀಗೆ ಹತ್ತು ಹಲವು ಸಮಸ್ಯೆಗಳು ಇಂದು ಪರಿಸರದಲ್ಲಿ ಉಂಟಾಗಿದೆ.

ಇದಕ್ಕೆಲ್ಲ ಮೂಲ ಕಾರಣ ಅಧುನೀಕತೆ, ನಗರಗಳ ಬೆಳವಣಿಗೆ, ಹೆಚ್ಚುತ್ತಿರುವ ಕೈಗಾರಿಕೆಗಳು, ವಿಜ್ಞಾನ -ತಂತ್ರಜ್ಞಾನದ ಅಭಿವೃದ್ಧಿ ಎಂಬ ಹಲವು ಹೆಸರಿನಲ್ಲಿ ಮಾನವನು ಮಾಡುವ ಪರಿಸರ ನಾಶ.

ಪರಿಸರವನ್ನು ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದ್ದೂ ಆಗಿದ್ದು ಈ ಕರ್ತವ್ಯವನ್ನು ನಮಗೆಲ್ಲರಿಗೂ ನೆನಪಿಸುವ ದಿನವಾಗಿದೆ.

ಈ ಒಂದು ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ್, ಪುರಸಭೆಯ ಮುಖ್ಯಾಧಿಕಾರಿಗಳು ಎಸ್ ಜಿ ಅಂಬಿಗೇರ, ಡಿ ವೈ ಎಸ್ ಪಿ ರಾಮನಗೌಡ.ಅ. ಹಟ್ಟಿ, ಅರಣ್ಯ ಇಲಾಖೆ RFO ಅರುಣ್ ಕುಮಾರ್, ಅರಣ್ಯ ಇಲಾಖೆ ಸಿಬ್ಬಂದಿಗಳು, ರಾಮದುರ್ಗದ ವಕೀಲರು ಭಾಗವಹಿಸಿದ್ದರು.

(ವರದಿ ಈರಣ್ಣಾ ಹುಲ್ಲೂರ)


Leave a Reply