karanataka

ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ


ಬೆಂಗಳೂರು: ಬಿಜೆಪಿ ಹಿರಿಯ ಶಾಸಕ, ಮಾಜಿ ಸಚಿವ ಸಿ.ಎಂ ಉದಾಸಿ (85) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಿ.ಎಂ ಉದಾಸಿ, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಆದರೆ ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ 2:50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ಶಿವಕುಮಾರ್ ಉದಾಸಿ ತಿಳಿಸಿದ್ದಾರೆ.

ಸಿ.ಎಂ.ಉದಾಸಿ ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದರು. 1994ರಲ್ಲಿ ಜೆ.ಹೆಚ್.ಪಟೇಲ್ ರ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿದ್ದರು. 2004ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಜವಳಿ ಸಚಿವರಾಗಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಾಳೆ ಸಿ.ಎಂ ಉದಾಸಿ ಅಂತ್ಯಕ್ರಿಯೆ ನಡೆಯಲಿದೆ.


Leave a Reply