BelagaviUncategorized

ಅಕ್ಕಿಸಾಗರ ಅಗ್ರೋ ಸೆಂಟರ್‌ ಮೇಲೆ ಕೃಷಿ ಇಲಾಖೆಯ ಅಧಿಕಾರಿಗಳು ದಾಳಿ


ಯರಗಟ್ಟಿ : ಜಿಲ್ಲೆಯ ಕೃಷಿ ಇಲಾಖೆಯ ಜಾಗೃತದಳದ ಅಧಿಕಾರಿಗಳು ಯರಗಟ್ಟಿ ತಾಲೂಕಿನ ಅಕ್ಕಿಸಾಗರದ
ಶ್ರೀ ಆಂಜನೇಯ ಅಗ್ರೋ ಸೆಂಟರ್‌ ಮೇಲೆ ಧೀಡಿರ್
ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಅಂಗಡಿ ಮಾಲೀಕರಾದ ಚಿದಾನಂದ ಎಸ್
ಕತ್ತಿ ಅವರು ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಕೃಷಿ ಇಲಾಖೆಯಿಂದ ಅಧಿಕೃತ ಪರವಾನಗೆ ಇಲ್ಲಾದೆ ಮಾರಾಟ ಮಾಡುತ್ತಿರುವುದು ಕಂಡುಬಂದಿದ್ದು. ಮತ್ತು ದರ ಪಟ್ಟಿ, ದಾಸ್ತಾನು ಹಾಗೂ ಇತರೆ ಯಾವುದೇ ದಾಖಲೆಗಳನ್ನು ನಿರ್ವಹಿಸದೆ ಮಾರಾಟ ಮಾಡುತ್ತಿರುವುದಲ್ಲದೆ ರೈತರಿಗೆ ಖರೀದಿಸಿದ ಯಾವುದೇ ಪರಿಕರಗಳಿಗೆ ಬಿಲ್ಲನ್ನು ಕೂಡ ನೀಡದಿರುವುದು ಬೆಳಕಿಗೆ ಬಂದಿದೆ.

ಜಿಲ್ಲೆಯ ಕೃಷಿ ಇಲಾಖೆಯ ಜಾಗೃತದಳದ ಅಧಿಕಾರಿಗಳಾದ ಆರ್‌.ಬಿ.ಪಾಟೀಲ್ ಮತ್ತು ಸುಪ್ರೀತಾ ಅಂಗಡಿ ಅವರ ಮುಂದಾಳತ್ವದಲ್ಲಿ ದಾಳಿ ನಡೆದಿದ್ದು ದಾಳಿ ವೇಳೆ ರೂ.1.9 ಲಕ್ಷ್ಯ ಮೌಲ್ಯದ 30 ವಿವಿಧ ಕೀಟನಾಶಕಗಳು, ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಜಪ್ತಿ ಮಾಡಿಲಾಗಿದೆ, ಮಾರಾಟ ಮಳಿಗೆಯನ್ನು ಸೀಜ್ ಮಾಡಿದ್ದು ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

ರೈತರಿಗೆ ಕೃಷಿ ನಿರ್ದೇಶಕ ಜಿಲಾನಿ ಮೊಖಾಶಿ ಸಲಹೆ.

ರೈತರು ಕೃಷಿ ಪರಿಕರಗಳನ್ನು ಕೃಷಿ ಇಲಾಖೆಯಿಂದ ಪರವಾನಿಗೆ ಪಡೆದ ಅಧಿಕೃತ ಮಾರಾಟಗಾರರಿಂದ ಖರೀದಿಸಬೇಕು ಮತ್ತು ತಪ್ಪದೆ ರಸೀದಿಯನ್ನು ಪಡೆದುಕೊಳ್ಳಬೇಕು ಎಂದು ಜಾಗೃತ ಕೋಶದ ಜಂಟಿ ಕೃಷಿ ನಿರ್ದೇಶಕ ಜಿಲಾನಿ ಮೊಖಾಶಿ ಅವರು ರೈತರಿಗೆ ಸಲಹೆ ನೀಡಿದರು.

ದಾಳಿ ಸಂದರ್ಭದಲ್ಲಿ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರವಿ ವರಗಣ್ಣವರ ಹಾಜರಿದ್ದರು.

(ವರದಿ ಈರಣ್ಣಾ ಹುಲ್ಲೂರ ಯರಗಟ್ಟಿ)


Leave a Reply