karanataka

ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರು ಬ್ಲ್ಯಾಕ್ ಫಂಗಸ್ ಗೆ ಬಲಿ


ಬೆಳಗಾವಿ : ಕೊರೊನಾ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹೊತ್ತಲ್ಲೇ ಜಿಲ್ಲೆಗೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಎದುರಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ ನಾಲ್ವರು ಬ್ಲ್ಯಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಬಲಿಯಾದವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.

ಇನ್ನು ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 18 ಜನರಿಗೆ ಬ್ಲ್ಯಾಕ ಫಂಗಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ 136 ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಂತಾಗಿದೆ.ಇನ್ನು ರಾಜ್ಯದ್ಧಲಿ ಈವರೆಗೆ ರಾಜ್ಯದಲ್ಲಿ ಕಪ್ಪು ಶಿಲೀಂಧ್ರದ 2,281 ಪ್ರಕರಣಗಳಿದ್ದು, 1,948 ಮಂದಿಗೆ ಚಿಕಿತ್ಸೆ ನೀಡುತ್ತಿದ್ದು, 102 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದರು.

(ವರದಿ ಈರಣ್ಣಾ ಹುಲ್ಲೂರ)


Leave a Reply