karanataka

ಬಂಡಾಯ ಸಾಹಿತಿ ಎಂದೇ ಖ್ಯಾತರಾಗಿದ್ದ ಸಿದ್ದಲಿಂಗಯ್ಯ ನಿಧನ ಖ್ಯಾತ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯ ಕೊರೊನಾಗೆ ಬಲಿ


ಬೆಂಗಳೂರು: ಬಂಡಾಯ ಸಾಹಿತಿ, ಹಿರಿಯ ಕವಿ ಡಾ.ಸಿದ್ದಲಿಂಗಯ್ಯ(66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ
ಕೊನೆಯುಸಿರೆಳೆದಿದ್ದಾರೆ.

ಕೆಲ ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತಿದ್ದ ಡಾ.ಸಿದ್ದಲಿಂಗಯ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದ ಅವರಿಗೆ ಮತ್ತೆ ಉಸಿರಾಟದ ತೊಂದರೆ ತೀವ್ರಗೊಂಡಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ದಲಿತ ಧ್ವನಿ ಎಂದೇ ಪ್ರಸಿದ್ಧಿ ಪಡೆದಿದ್ದ ಸಿದ್ದಲಿಂಗಯ್ಯ ಸಾಮಾಜಿಕ ಸಮಾನತೆ, ಹೋರಾಟದ ಬಗ್ಗೆ ಕಾವ್ಯ, ಸಾಹಿತ್ಯಗಳ ಮೂಲಕ ಗಮನ ಸೆಳೆದಿದ್ದರು. ನಾಟಕ, ಪ್ರಬಂಧ, ವಿಮರ್ಷೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದರು.

ಸಿದ್ದಲಿಂಗಯ್ಯ ಅವರು ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದರು. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆಯಲ್ಲಿ 1954ರಲ್ಲಿ
ಜನಿಸಿದ್ದರು.

ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು, ಅಲ್ಲೆಕುಂತವರೆ ಸಿದ್ದಲಿಂಗಯ್ಯ ಅವರ ಪ್ರಮುಖ ಕವನ ಸಂಕಲನಗಳು. ಹಕ್ಕಿ ನೋಟ, ರಸಗಳಿಗೆಗಳು, ಎಡಬಲ, ಉರಿಕಂಡಾಯ ವಿಮರ್ಶನಾ ಕೃತಿಗಳು. ಅವತಾರಗಳು ಸದನದಲ್ಲಿ ಸಿದ್ದಲಿಂಗಯ್ಯ ಲೇಖನಗಳ ಸಂಕಲನಗಳಾಗಿದ್ದು, ಏಕಲವ್ಯ ಹಾಗೂ ನೆಲಸಮ ಪ್ರಮುಖ ನಾಟಕ ಕೃತಿಗಳಾಗಿವೆ.


Leave a Reply