Koppal

ಪೋಷಣ ಅಭಿಯಾನ ಯೋಜನೆ ಅಡಿಯಲ್ಲಿ ಸ್ಮಾರ್ಟ್ ಫೋನ್ ವಿತರಣೆ ಮತ್ತು ಕೊರೋನಾ ವಾರಿಯರ್ಸ್ಗೆ ಸನ್ಮಾನ


ಕೊಪ್ಪಳ ಜ.08 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಕನಕಗಿರಿ ಇವರ ಸಂಯುಕ್ತಾಶ್ರಯದಲ್ಲಿ ಪೋಷಣ ಅಭಿಯಾನ ಯೋಜನೆ ಅಡಿಯಲ್ಲಿ ಸ್ಮಾರ್ಟ್ ಫೋನ್ ವಿತರಣೆ ಮತ್ತು ಕೊರೋನಾ ವಾರಿಯರ್ಸ್ಗೆ ಸನ್ಮಾನ ಸಮಾರಂಭವನ್ನು ಜನವರಿ 10 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ಕಾರಟಗಿ ಪಟ್ಟಣದ ಪದ್ಮಶ್ರೀ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ನೆರವೇರಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಘನ ಉಪಸ್ಥಿತರಿರುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ದಢೇಸೂಗೂರ ರವರು ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಕೆ.ರಾಜಶೇಖರ ಹಿಟ್ನಾಳ, ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಕೆ.ರಾಘವೇಂದ್ರ ಹಿಟ್ನಾಳ್, ಹಾಲಪ್ಪ ಆಚಾರ್, ವಿಧಾನ ಪರಿಷತ್ ಸದಸ್ಯರುಗಳಾದ ಶಶಿಲ್ ಜಿ. ನಮೋಶಿ, ಬಸವರಾಜ ಪಾಟೀಲ್ ಇಟಗಿ, ಡಾ.ಚಂದ್ರಶೇಖರ್ ಬಿ.ಪಾಟೀಲ್. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರು ಹಾಗೂ ಅಧ್ಯಕ್ಷರಾದ ಶರಣು ಭೀಮಣ್ಣ ತಳ್ಳಿಕೇರಿ, ತುಂಗಭದ್ರ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ತಿಪ್ಪೇರುದ್ರ ಸ್ವಾಮಿ ಬಿ.ಹೆಚ್.ಎಂ., ಜಿಪಂ ಉಪಾಧ್ಯಕ್ಷೆ ಬೀನಾ ಗೌಸ್, ಕನಕಗಿರಿ ತಾ.ಪಂ. ಅಧ್ಯಕ್ಷೆ ಗೌರಮ್ಮ ಜಡಿಯಪ್ಪ, ಕಾರಟಗಿ ತಾಪಂ ಅಧ್ಯಕ್ಷ ಪ್ರಕಾಶ ಮಾಬಳೇಶ್ವರಪ್ಪ ಭಾವಿ, ಕಾರಟಗಿ ಪುರಸಭೆ ಅಧ್ಯಕ್ಷ ಶರಣೇಶ ನಾಗಪ್ಪ ಸಾಲೋಣಿ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ.ರಶ್ಮೀ ಮಹೇಶ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯುಕ್ತರಾದ ಪೆದ್ದಪ್ಪಯ್ಯ ಆರ್.ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶಶಿಧರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅಕ್ಕಮಹಾದೇವಿ ಕೆ.ಹೆಚ್., ಜಿಪಂ, ತಾಪಂ, ಪರಸಭೆ ಹಾಗೂ ಪಟ್ಟಣ ಪಂಚಾಯತಿ ಸದಸ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.


Leave a Reply