Belagavi

ಸರಕಾರದ ಯೋಜನೆಗಳು ಅನುಷ್ಠಾನದಲ್ಲಿ ಸಾರ್ವಜನಿಕರ ಸಹಭಾಗಿತ್ವ ಕುರಿತು ಉಪನ್ಯಾಸ


ಬೆಳಗಾವಿ:೧೫- ಕ.ಸಾ.ಪ. ಬೆಳಗಾವಿ ಜಿಲ್ಲೆಯ ಚ.ಕಿತ್ತೂರು ತಾಲೂಕಾ ಘಟಕ ಹಾಗೂ ಎಲ್ಲ ತಾಲೂಕು ಕಸಾಪ ಘಟಕಗಳ ಸಹಯೋಗದೊಂದಿಗೆ ರವಿವಾರ ದಿನಾಂಕ:೧೮/೦೭/೨೦೨೧ ರಂದು ಸಂಜೆ ೪:೦೦ ಗಂಟೆಗೆ, “ಸರಕಾರದ ಯೋಜನೆಗಳು ಅನುಷ್ಠಾನದಲ್ಲಿ ಸಾರ್ವಜನಿಕರ ಸಹಭಾಗಿತ್ವ” ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ವೆಬಿನಾರ್ ಮೂಲಕ ನಡೆಯುವ ಈ ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಸಾನಿಧ್ಯವನ್ನು ವಹಿಸುವರು. ಅಧ್ಯಕ್ಷತೆಯನ್ನು ಶ್ರೀಮತಿ ಮಂಗಲಾ ಮೆಟಗುಡ್ಡ ಕ.ಸಾ.ಪ. ಬೆಳಗಾವಿ ಜಿಲ್ಲಾಧ್ಯಕ್ಷರು ವಹಿಸುವರು. ಶ್ರೀ ಬಾಲರಾಜ ಭಜಂತ್ರಿ ಗ್ರಾಮ ಪಂಚಾಯತ್ ಅಬಿವೃದ್ಧಿ ಅಧಿಕಾರಿಗಳು(ಪಿ.ಡಿ.ಓ.)ಲೋಂಡಾ ತಾಲೂಕ ಖಾನಾಪೂರ ಇವರು “ಸರಕಾರದ ಯೋಜನೆಗಳು ಅನುಷ್ಠಾನದಲ್ಲಿ ಸಾರ್ವಜನಿಕರ ಸಹಭಾಗಿತ್ವ” ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ. ಶ್ರೀ ಅವಳೆಕುಮಾರ ಸಾಹಿತಿಗಳು ಹಾಗೂ ಮುಖ್ಯೋಪಾಧ್ಯಾಯರು, ಪ್ರೌಢಶಾಲೆ ರಾಯಬಾಗ ಇವರು ಆಶಯನುಡಿಗಳನ್ನು ಮಂಡಿಸುವರು. ಶ್ರೀ.ಎಂ.ಎಸ್.ಕಲ್ಮಠ ಅವರು ಸ್ವಾಗತವನ್ನು ಮಾಡಲಿದ್ದಾರೆ. ಡಾ.ಎಸ್.ಬಿ.ದಳವಾಯಿ ಅವರು ವಂದನಾರ್ಪಣೆಯನ್ನು ಮಾಡಲಿದ್ದಾರೆ. ಡಾ.ಶೇಖರ ಹಲಸಗಿ ಅಧ್ಯಕ್ಷರು ಕಸಾಪ ಚ.ಕಿತ್ತೂರು ಅವರು ಅವರು ಕಾರ್ಯಕ್ರಮವನ್ನು ಸಂಯೋಜನೆ ಹಾಗೂ ನಿರೂಪಣೆಯನ್ನು ಮಾಡಲಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಸಾಪ ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಾ ಅಧ್ಯಕ್ಷರುಗಳು ಮತ್ತು ಎಲ್ಲ ತಾಲೂಕಿನ ಕಾರ್ಯಕಾರಿ ಸಮೀತಿಯ ಸರ್ವ ಸದಸ್ಯರು ಹಾಗೂ ಜಿಲ್ಲಾ ಕಾರ್ಯಕಾರಿ ಸಮೀತಿಯ ಸರ್ವ ಸದಸ್ಯರು ಹಿರಿಯ-ಕಿರಿಯ ಸಾಹಿತಿಗಳು, ಕಲಾವಿದರು ಮತ್ತು ಸಮಸ್ತ ಕನ್ನಡಾಭಿಮಾನಿಗಳು ಈ ಕೆಳಗಿನ ಕೊಂಡಿಯನ್ನು ಬಳಸಿಕೊಂಡು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕ.ಸಾ.ಪ. ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ ಅವರು ಮತ್ತು ಜಿಲ್ಲಾ ಕಾರ್ಯಕಾರಿ ಸಮೀತಿಯ ಸರ್ವ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Leave a Reply