Uncategorized

ಸಿರವಾರ: ಶಿಶು ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


ರಾಯಚೂರು, ಜು.15, ಜಿಲ್ಲೆಯ ಸಿರವಾರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇಲಾಖೆಯು ತೋರಣದಿನ್ನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಕಾಪೂರ ಅಂಗನವಾಡಿ ಕೇಂದ್ರ- 1ಕ್ಕೆ ಅಂಗನವಾಡಿ ಕಾರ್ಯಕರ್ತೆ(ಇತರೆ) ಮತ್ತು ನವಲಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಣಚೇಡ್ ಅಂಗನವಾಡಿ ಕೇಂದ್ರ ಸಂಖ್ಯೆ-1 (ಇತರೆ), ಬಾಗಲವಾಡ ಅಂಗನವಾಡಿ ಕೇಂದ್ರ-1 (ಇತರೆ), ಚಾಗಭಾವಿ ವ್ಯಾಪ್ತಿಯ ಕಡದಿನ್ನಿ ಕ್ಯಾಂಪ್ (ಇತರೆ) ಸೇರಿದಂತೆ 3 ಸಹಾಯಕಿಯರ ಗೌರವ ಸೇವೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ SSಐಅ (10ನೇ ತರಗತಿ) ಪಾಸ್ ಆಗಿರಬೇಕು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ಪಾಸ್ ಆಗಿರಬೇಕು, ಗರಿಷ್ಟ 9ನೇ ತರಗತಿ ತೇರ್ಗಡೆ ಹೊಂದಿರುವವರು ಸಹ ಅರ್ಜಿ ಸಲ್ಲಿಸಬಹುದು. ಯಾವುದೇ ಹುದ್ದೆಗಳಿಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ.
ಗಿಲ್ಲೇಸೂಗೂರು;
ತಾಲೂಕಿನ ಗಿಲ್ಲೇಸೂಗೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಜಾಗೀರ ವೆಂಕಟಪೂರು ಅಂಗನವಾಡಿ ಕೇಂದ್ರ ಸಂಖ್ಯೆ-2 ಅಂಗನವಾಡಿ ಕಾರ್ಯಕರ್ತೆ (ಇತರೆ), ಚಂದ್ರಬಂಡ ಅಂಗನವಾಡಿ ಕೇಂದ್ರ ಸಂಖ್ಯೆ-4 ಅಂಗನವಾಡಿ ಕಾರ್ಯಕರ್ತೆ (ಪ.ಪಂ), ಮಿಟ್ಟಿ ಮಲ್ಕಾಪೂರು ಅಂಗನವಾಡಿ ಕೇಂದ್ರ ಸಂಖ್ಯೆ-2 ಅಂಗನವಾಡಿ ಸಹಾಯಕಿ(ಪ.ಪಂ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ದಿನಾಂಕ 2021ರ ಜುಲೈ.14 ರಿಂದ 2021ರ ಆಗಸ್ಟ್ 13 ರವರೆಗೆ ಸಲ್ಲಿಸಬಹುದಾಗಿದೆ ಎಂದು ಸಿರವಾರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ-ವಿಶ್ವನಾಥ ಸಾಹುಕಾರ ರಾಯಚೂರು.


Leave a Reply