Uncategorized

ಯೋಜನೆಗಳ ಉಪಯೋಗ ಪಡೆದುಕೊಳ್ಳಿ; ಜಿ.ಯು.ಹುಡೇದ


ರಾಯಚೂರು, ಜು.15, ಸರ್ಕಾರ ಕೌಶಲ್ಯಾಭಿವೃದ್ಧಿಗೆ ಅನೇಕ ಯೋಜನೆಗಳನ್ನು ತಂದಿದೆ. ಯುವಕರು ಅವುಗಳ ಸದುಪಯೋಗ ಪಡೆದುಕೊಂಡು ಉದ್ಯೋಗದಲ್ಲಿ ತೊಡಗಬೇಕು’ ಎಂದು ಸಿಡಾಕ್ ಜಂಟಿ ನಿರ್ದೇಶಕರ ಜಿ.ಯು.ಹುಡೇದ ಅವರು ಹೇಳಿದರು.

ನಗರದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಇತ್ತಿಚಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಂಯುಕ್ತಾಶ್ರದಲ್ಲಿ ಸ್ವಯಂ ಉದ್ಯೋಗ ಸ್ಥಾಪಿಸುವವರಿಗೆ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ತಿಳುವಳಿಕೆ ಶಿಬಿರವನ್ನು ಉದ್ದೇಶಿಸಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಲಕ್ಕೆ ತಕ್ಕಂತೆ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಉದ್ಯೋಗ ಪಡೆದುಕೊಳ್ಳಬಹುದು. ಸ್ವಂತ ಉದ್ಯೋಗವನ್ನು ಸಹ ಮಾಡಬಹುದು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಬಸವರಾಜ ಯಂಕಂಚಿ ಅವರು ಮಾತನಾಡಿ, ನಮ್ಮ ದೇಶದ ಮಹಿಳೆಯರು ತುಂಬಾ ಸೃಜನಶೀಲರು. ಆ ಸೃಜನಶೀಲತೆಯನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದು ತಿಳಿದಿಲ್ಲ. ಕೌಶಲ್ಯಾಭಿವೃದ್ಧಿ ಯೋಜನೆಗಳ ಅಡಿ ತರಬೇತಿ ಪಡೆದರೆ ಅವರು ಸ್ವಾವಲಂಬಿಗಳಾಗಬಹುದು ಎಂದು ಹೇಳಿದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರಾಜೇಶ ಬಾವಗಿ, ಹೇಮಂತಕುಮಾರ್, ಶಿವಕುಮಾರ್, ರೇಣುಕಾ, ಶ್ರೀಕಾಂತ.ಟಿ. ಬನ್ನಿಗೋಳ, ಶಂಕರ.ಎಸ್. ಕುಕ್ಕಾಪಾಟೀಲ, ಮೌನೇಶ ಹೊಟ್ಟೇರ್ ಸೇರಿದಂತೆ ಇತರರು ಇದ್ದರು.

ವರದಿ-ವಿಶ್ವನಾಥ ಸಾಹುಕಾರ ರಾಯಚೂರು.


Leave a Reply