Belagavi

ಬೈಲಹೊಂಗಲ ಪ್ರಗತಿ ಪರಿಶೀಲನಾ ಸಭೆ, ಸ್ಥಗಿತಗೊಂಡ ಕಾಮಗಾರಿ ಪೂರ್ಣಗೊಳಿಸಲು ಸೂಚನೆ


ಬೈಲಹೊಂಗಲ 17:- ಜಿಲ್ಲಾ ಪಂಚಾಯತಿ ಬೆಳಗಾವಿ, ತಾಲೂಕಾ ಪಂಚಾಯತಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ತಾಲೂಕಾ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಇಲ್ಲಿಯ ತಾಲೂಕಾ ಪಂಚಾಯತ ಸಂಭಾಗಣದಲ್ಲಿ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅದ್ಯಕ್ಷತೆ ವಹಿಸಿದ್ದರು, ಕಿತ್ತೂರ ಶಾಸಕ ಮಹಾಂತೇಶ ದೊಡಗೌಡರ ಅತಿಥಿಗಳಾಗಿ ಆಗಮಿಸಿದ್ದರು.

ಈ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು  ಭಾಗವಹಿಸಿ ತಮ್ಮ ಇಲಾಖೆಗಳಿಂದ ತಾಲೂಕಿನಲ್ಲಿ ನಡೆಯುವ ವಿವಿಧ ಕಾಮಗಾರಿಗಳ ಕುರಿತು ವಿವರಿಸಿದರು ಮುಖ್ಯವಾಗಿ ಕುಡಿಯುವ ನೀರು, ರಸ್ತೆ, ವಿದ್ಯುತ ಮುಂತಾದವುಗಳ ಕುರಿತು ಚರ್ಚಿಸಲಾಯಿತು.

ತಾಲೂಕಿನಲ್ಲಿ ಈಗಾಗಲೇ ಅಪೂರ್ಣಗೊಂಡ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಶಾಸಕರಾದ ಮಹಾಂತೇಶ ಕೌಜಲಗಿ, ಮಹಾಂತೇಶ ದೊಡಗೌಡರ ಅಧಿಕಾರಿಗಳಿಗೆ ಸೂಚಿಸಿದರು.

ತಹಸೀಲ್ದಾರ ಬಸವರಾಜ ನಾಗರಾಳ ಸ್ವಾಗತಿಸಿದರು, ತಾ ಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾಂವಿ ವಂದಿಸಿದರು..

 


Leave a Reply