Koppal

ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಾಸರಾದ ಅಮರೇಗೌಡ ಬಯ್ಯಾಪೂರು ಅವರಿಂದ 5,000 ಮಾಸ್ಕ ವಿತರಣೆ.


ಕುಷ್ಟಗಿ: ಕೊರೊನಾ ಹಿನ್ನೆಲೆ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಹಾಗೂ ಅರ್ಹತೆಯ ಹಿತ ದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುತ್ತಿರುವುದು ಒಳ್ಳೆಯ ನಿರ್ಧಾರವಾಗಿದೆ ಎಂದು ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಹೇಳಿದರು. ಇಲ್ಲಿಯ ಗುರು ಭವನದಲ್ಲಿ ಶುಕ್ರವಾರದಂದು ಶಾಸಕರು ತಮ್ಮ ವಯಕ್ತಿಕ ಹಣದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ತರಿಸಿದ ಸುಮಾರು 5,000 ಮಖಗವಸು (ಮಾಸ್ಕ್)ಗಳನ್ನು ತಾಲೂಕಿನ ಪ್ರೌಢಶಾಲೆಗಳ ಶಿಕ್ಷಕರಿಗೆ ವಿತರಿಸಿ ಅವರು ಮಾತನಾಡಿದರು.

ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದಲ್ಲಿ ಕೇಂದ್ರ ಹಾಗೂ ಇತರೆ ರಾಜ್ಯಗಳ ಸರ್ಕಾರಗಳು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಉತ್ತೀರ್ಣರನ್ನಾಗಿ ಮಾಡುವ ಕಾರ್ಯ ಮಾಡಿದೆ. ಆದರೆ, ನಮ್ಮ ರಾಜ್ಯ ಸರ್ಕಾರ ಕಳೆದ ವರ್ಷ ಇದೇ ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆರು ದಿನಗಳ ಕಾಲ ಎಲ್ಲಾ ವಿಷಯಗಳ ಪರೀಕ್ಷೆ ನಡೆಸಿ ಯಶಸ್ವಿಯಾಗಿತ್ತು. ಪ್ರಸಕ್ತ ವರ್ಷದ ಸಾಲಿನಲ್ಲೂ ಕೂಡಾ ಪರೀಕ್ಷೆ ನಿಷೇಧಿಸದೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಹಾಗೂ ಅವರ ಅರ್ಹತೆ ದೃಷ್ಟಿಯಿಂದ ಬಹು ಆಯ್ಕೆ ಪ್ರಶ್ನೆಗಳ ಪ್ರಶ್ನೆಪತ್ರಿಕೆ ನೀಡಿ ಎರಡು ದಿನಗಳ ಕಾಲ ಪರೀಕ್ಷೆ ನಡೆಸುತ್ತಿರುವುದು ಒಳ್ಳೆಯ ನಿರ್ಧಾರವಾಗಿದೆ ಎಂದರು.

ಜು.19 ಮತ್ತು 22 ರಂದು ಪರೀಕ್ಷೆ ನಡೆಸಲು ನಿರ್ಧರಿಸಿರುವ ಹಿನ್ನೆಲೆ ಈಗಾಗಲೇ ತಾಲೂಕಿನಲ್ಲಿ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಕೈಗೊಂಡಿದ್ದು, ತಾಲೂಕಿನಲ್ಲಿ ಒಟ್ಟು 28 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಸರ್ಕಾರದ ಕೋವಿಡ್ ನಿಯಮಗಳ ಅನ್ವಯ ಪ್ರತಿಯೊಂದು ಕೊಠಡಿಯಲ್ಲಿ ಹನ್ನೆರಡರಿಂದ ಹದಿನಾಲ್ಕು ವಿದ್ಯಾರ್ಥಿಗಳನ್ನು ಕೂಡಿಸಲಾತ್ತದೆ. ಇದರಿಂದ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗಲಿದೆ ಎಂದರು.

ತಾಲೂಕಿನ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರರಾದ ಎಂ.ಸಿದ್ಧೇಶ ಅವರು ಭೇಟಿ ನೀಡಿ ಪರಿಶೀಲಿಸುವ ಕಾರ್ಯ ಮಾಡಲಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯ ಹಿತ ಕಾಯ್ದುಕೊಳ್ಳಲು ತಾಲೂಕಾ ವೈದ್ಯಾಧಿಕಾರಿ ಡಾ.ಆನಂದ ಗೋಟೂರು ಅವರು ನೋಡಿಕೊಳ್ಳಲಿದ್ದಾರೆ. ಜತೆಗೆ ಪೊಲೀಸ್ ಇಲಾಖೆ ಪರೀಕ್ಷಾ ಕೇಂದ್ರಗಳ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಿದ್ದಾರೆ ಎಂದ ಶಾಸಕ ಬಯ್ಯಾಪೂರ ಅವರು, ವಿದ್ಯಾರ್ಥಿಗಳ ಸುರಕ್ಷತೆಗೆ ಗಮನ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಈಗಲೇ ಮುಂಜಾಗ್ರತಾ ಕ್ರಮ ಅನುಸರಿಸಿ ಎಲ್ಲರೂ ಜವಾಬ್ದಾರಿಯುತವಾಗಿ ಪರೀಕ್ಷೆ ನಡೆಸಲು ಇಲಾಖೆ ಅಧಿಕಾರಿಗಳು ಶಿಕ್ಷಕರು ಮುಂದಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಸೀಲ್ದಾರರಾದ ಎಂ.ಸಿದ್ಧೇಶ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಜಯರಾಮ ಚವ್ಹಾಣ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮಗ್ಗದ, ಪಿಎಸ್ ಐ ತಿಮ್ಮಣ್ಣ ನಾಯಕ, ತಾಲೂಕು ವೈದ್ಯಾಧಿಕಾರಿ ಡಾ.ಆನಂದ ಗೋಟೂರು ಹಾಗೂ ಪ್ರೌಢ ಶಾಲೆ ಶಿಕ್ಷಕರು ಮತ್ತಿತರರಿದ್ದರು.

ವರದಿ : ಶೇಖರ್.ಎಸ್.ಜಿ.ಕನಸಾವಿ.


Leave a Reply