Belagavi

ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ನಿಮಿತ್ಯ ಮದ್ಯದ ಅಂಗಡಿ ಹಾಗೂ ಮದ್ಯ ತಯಾರಿಕಾ ಘಟಕಗಳು ಬಂದ್


ಬೆಳಗಾವಿ, ಜು.೨೦: ಬೆಳಗಾವಿ ಜಿಲ್ಲೆಯಾದ್ಯಂತ (ಬೆಳಗಾವಿ ತಾಲೂಕು ಹೊರತುಪಡಿಸಿ) ಬಕ್ರೀದ್ ಹಬ್ಬವನ್ನು ಆಚರಿಸಲಿರುವ ಪ್ರಯುಕ್ತ ಜು.೨೧ ರ ಬೆಳಿಗ್ಗೆ ೦೬ ಗಂಟೆಯಿAದ ಮಧ್ಯರಾತ್ರಿ ೧೨ ಗಂಟೆಯವರೆಗೆ ಎಲ್ಲ ಮದ್ಯದ ಅಂಗಡಿ ಹಾಗೂ ಮದ್ಯ ತಯಾರಿಕಾ ಘಟಕಗಳನ್ನು ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಎಮ.ಜಿ.ಹಿರೇಮಠ ಅವರು ಸೂಚಿಸಿರುತ್ತಾರೆ.
ಸಾರ್ವಜನಿಕ ಹಿತ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳಲು ಮಾಲೀಕರು ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.
ಅಬಕಾರಿ ಜಂಟಿ ಆಯುಕ್ತರು, ಅಬಕಾರಿ ಆಯುಕ್ತರು, ಬೆಳಗಾವಿ/ಚಿಕ್ಕೋಡಿ ಅಬಕಾರಿ ಉಪ ಅಧಿಕ್ಷಕರು ಸದರಿ ದಿನಗಳಂದು ಮದ್ಯ ಮಾರಾಟ ಆಗದಂತೆ ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು.
ಈ ಸೂಚನೆಯನ್ನು ಉಲ್ಲಂಘಿಸಿದ್ದಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ ರ ಕಲಂ ೩೨ ರನ್ವಯ ಶಿಕ್ಷಗೆ ಒಳಪಡುವರು ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.


Leave a Reply