Belagavi

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ


ಮೂಡಲಗಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ೮ ವಲಯಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮ ಹಾಗೂ ಸುಲಲಿತವಾಗಿ ಎರಡನೇಯ ಪರೀಕ್ಷೆ ಜರುಗಿತು. ಕೋವಿಡ್-೧೯ ಎಸ್.ಒ.ಪಿ ಪ್ರಕಾರ ಜರುಗಿದವು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ೪೫೦೨೩ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ ಎಂದು ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.
ಗುರುವಾರ ಜರುಗಿದ ಎರಡನೇಯ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಪ್ರೌಢ ಶಾಲೆಯಲ್ಲಿ ಮಾತನಾಡಿದ ಅವರು, ಕೋವಿಡ್-೧೯, ಮಳೆಯ ತೊಂದರೆಯಲ್ಲಿಯು ಪರೀಕ್ಷೆಯು ಅತ್ಯುತ್ತಮವಾಗಿ ಮುಗಿದಿವೆ. ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬಂದು ಹೋಗಲು ಸ್ವಲ್ಪ ತೊಂದರೆಯಾದರು ಉತ್ಸಾಹದಿಂದ ಮಕ್ಕಳು ನಿಗದಿತ ಸಮಯಕ್ಕೆ ಹಾಜರಾಗಿ ಪರೀಕ್ಷೆಯಲ್ಲಿ ಭಾಗವಹಿಸಿದ್ದಾರೆ. ಪ್ರತಿ ವಿದ್ಯಾರ್ಥಿಗಳಿಗೆ ಮೆಡಿಕೆಟೆಡ್ ಮಾಸ್ಕ, ಸ್ಯಾನಿಟೈಸ್ ಹಾಗೂ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಸಿಬ್ಬಂದಿಗಳು ಲಸಿಕೆಯನ್ನು ಪಡೆದುಕೊಂಡಿದ್ದಾರೆ.
ವೈದ್ಯಕೀಯ, ಪೋಲಿಸ್, ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್, ಸಾರಿಗೆ ಇಲಾಖೆ, ಆಶಾ ಕಾರ್ಯಕರ್ತೆಯರು, ಸ್ಕೌಟ್ ಮತ್ತು ಗೈಡ್ಸ್ಗಳ ಸೇವೆ ಮೆಚ್ಚುವಂತಹದು. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಹಾಗೂ ಕೊರೋನಾ ನಿಯಮಾಳಿಗಳ ಪ್ರಕಾರ ನಡೆದುಕೊಂಡರು. ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎರಡನೇಯ ಪರೀಕ್ಷೆಯು ಅಚ್ಚುಕಟ್ಟಾಗಿ ಪರೀಕ್ಷಾ ಮಂಡಳಿಯ ನಿಯಮಾನುಸಾರ ಜರುಗಿದವು ಎಂದು ತಿಳಿಸಿದರು.
ಮೂಡಲಗಿ ಬಿಇಒ ಅಜಿತ ಮನ್ನಿಕೇರಿ, ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯಲ್ಲಿ ೬೯೨೩ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ೩೫ ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥಿತ ರೀತಿಯಲ್ಲಿ ಭಾಷಾ ಪರೀಕ್ಷೆಗಳು ಕನ್ನಡ, ಹಿಂದಿ ಮತ್ತು ಇಂಗ್ಲಿಷ ಪರೀಕ್ಷೆಗಳು ಜರುಗಿದವು ಎಂದು ತಿಳಿಸಿದರು ಅವರು ಸುಳಲಿತವಾಗಿ ಪರೀಕ್ಷೆಗಳು ಜರುಗಲಿಕ್ಕೆ ಸಹಕರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಮತ್ತು ಇಲಾಖಾ ಅಧಿಕಾರಿಗಳನ್ನು, ಕಂದಾಯ, ರಾಜ್ಯ ರಸ್ತೆ ಸಾರಿಗೆ, ಪೌರಾಡಳಿತ, ಗ್ರಾಮೀಣಾಅಭಿವೃದ್ಧಿ, ಆರೋಗ್ಯ ಇಲಾಖೆ, ಜನ ಪ್ರತಿನಿಧಿಗಳನ್ನು ಶಿಕ್ಷಕರನ್ನು ಹಾಗೂ ವಿದ್ಯಾರ್ಥಿ ಪಾಲಕರನ್ನು ಸ್ಮರಿಸಿದರು.
ವಲಯದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಬೆಳಗಾವಿ ಸಿಟಿಇ ಪ್ರಾಚಾರ್ಯ ರಾಜೀವ ನಾಯಕ, ಮೂಡಲಗಿ ತಹಶೀಲ್ದಾರ ಡಿ.ಜಿ ಮಹಾತ, ಚಿಕ್ಕೋಡಿ ಮದ್ಯಾಹ್ನ ಬಿಸಿಯೂಟ ಶಿಕ್ಷಣಾಧಿಕಾರಿ ಡಿ.ಎಸ್.ಕುಲಕರ್ಣಿ ಭೇಟಿ ನೀಡಿ ಪರಿಶೀಲಿಸಿದರು.


Leave a Reply