Koppal

ಪಡಿತರ ಚೀಟಿಗಳ ಸದಸ್ಯರ ಇ-ಕೆವೈಸಿ ಪುನರಾರಂಭ


ಕೊಪ್ಪಳ ಜ.08 : ಆಹಾರ, ನಾಗರಿಕ ಸರಬರಾಜು ಇಲಾಖೆಯ ಆಯುಕ್ತರ ನಿರ್ದೇಶನದಂತೆ ಜಿಲ್ಲೆಯ ಪಡಿತರ ಚೀಟಿದಾರರಿಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆ-2013 ರ ನಿಯಮದಂತೆ 2021 ರ ಜನವರಿ 01 ರಿಂದ ಪಡಿತರದಾರರ ಇ-ಕೆ.ವೈಸಿಯನ್ನು ಪುನರಾರಂಭಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಆದ್ದರಿಂದ ಜಿಲ್ಲೆಯಲ್ಲಿ ಹೊಸದಾಗಿ ಸೃಜಿಸಿದ ಜಿಎಸ್‌ಸಿ ಮಾಡಿದ ಪಡಿತರ ಚೀಟಿಗಳನ್ನು ಹೊರತುಪಡಿಸಿ ಮೊದಲ ಹಂತದಲ್ಲಿ ಇ-ಕೆವೈಸಿ ಮಾಡದಿರುವ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ಇ-ಕೆವೈಸಿಯನ್ನು ಸಂಬAಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಮಾಡಿಸಿಕೊಳ್ಳಲು ಪಡಿತರ ಚೀಟಿದಾರರು ಆಧಾರ ಕಾರ್ಡ್, ಪಡಿತರ ಚೀಟಿ, ಎಲ್‌ಪಿಜಿ ಪಾಸ್‌ಬುಕ್, ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಕೋವಿಡ್-19 ನಿಯಮಗಳನ್ನು ತಪ್ಪದೇ ಪಾಲಿಸಿಕೊಂಡು ಇ-ಕೆವೈಸಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply