Belagavi

ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪ್ರೊ. ಜಿ.ಕೆ ಖಡಬಡಿ ಅವರಿಗೆ, ಭಾವಪೂರ್ಣ ಶ್ರದ್ಧಾಂಜಲಿ


ಬೆಳಗಾವಿ-೨೪:ಹಿರಿಯ ಸಾಹಿತಿಗಳಾದ ಪ್ರೊ.ಜಿ.ಕೆ.ಖಡಬಡಿ ಇವರು ತಮ್ಮ ೮೦ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಎಂದು ತಿಳಿಸಲು ವಿಷಾದವೆನುಸುತ್ತದೆ. ಬಳ್ಳಾರಿ ಕೊಟ್ಟುರೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ನಿವೃತ್ತಿ ನಂತರ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಪ್ರಾರಂಭಿಕ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದರು. ಸದಾ ಕ್ರೀಯಾಶೀಲರಾದ, ಪ್ರೊ.ಜಿ.ಕೆ.ಖಡಬಡಿ ಅವರು ಪರಿಸರ ಮಿತ್ರ ಸಂಘ ಕಟ್ಟಿ ಪರಿಸರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು. ಸಾಹಿತಿಗಳಾಗಿ, ಶಿಕ್ಷಣತಜ್ಞರಾಗಿ, ಪರಿಸರ ಪ್ರೇಮಿಯಾಗಿ, ಲೇಖಕರಾಗಿ, ಉತ್ತಮ ಆಡಳಿತಗಾರರಾಗಿ ಶಿಕ್ಷಕರನ್ನು ರೂಪಿಸುವ ಶಿಲ್ಪಿಯಾಗಿ ತಮ್ಮನ್ನು ಗುರುತಿಸಿಕೊಂಡವರು. ಇವರು ಪರಿಸರದ ಕುರಿತು ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಇತ್ತಿಚೆಗೆ ಪರಿಸರ ಪ್ರಜ್ಞೆ, ಪರಿಸರ ಗೀತೆಗಳು ಎಂಬ ಪುಸ್ತಕಗಳನ್ನು ಬಿಡುಗಡೆಗೊಳಿಸಿದ್ದರು. ಕ.ಸಾ.ಪ ಲಾಕಡೌನ್ ಉಪನ್ಯಾಸ ಮಾಲಿಕೆಯಲ್ಲಿ ಪರಿಸರದ ಕುರಿತು ಉಪನ್ಯಾಸ ನೀಡಿದ್ದರು. ಇವರು ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ದೇವರು ಇವರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಎಂದು, ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀ ಮೆಟಗುಡ್ಡ ಅವರು ಹಾಗೂ ಬೆಳಗಾವಿ ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಿದರು.


Leave a Reply