Belagavi

ಅಂಗನವಾಡಿ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ


ಬೆಳಗಾವಿ, ಜು.೨೭: ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ (ನಗರ) ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗಾಗಿ ಅರ್ಜಿ ಅಹ್ವಾನಿಸಲಾಗಿತ್ತು. ಬಂದ ಅರ್ಜಿ ಆಧರಿಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ಧಪಡಿಸಿ ಈ ಕಚೇರಿ ಮತ್ತು ಸಂಬAಧ ಪಟ್ಟ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಅರ್ಜಿ ಸಲ್ಲಿಸಿದ ಬಾದಿತ ಅಭ್ಯರ್ಥಿಗಳಿಂದ ಆಕ್ಷೇಪಣೆಗಳಿದ್ದರೆ ಅಗಸ್ಟ್ ೧೨ ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲ ಭವನ ಕಟ್ಟಡ, ಶ್ರೀನಗರ ಬೆಳಗಾವಿಯಲ್ಲಿರುವ ಪೆಟ್ಟಿಗೆಯಲ್ಲಿ ಅರ್ಹ ದಾಖಲೆಗಳೊಂದಿಗೆ ಅಕ್ಷೇಪಣೆ ಸಲ್ಲಿಸಬಹುದು.
ಇಲ್ಲವೇ ಅಂಚೆ ಮೂಲಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಬೆಳಗಾವಿ (ನಗರ) ನಿಗಧಿತ ದಿನಾಂಕದೊಳಗೆ ತಲುಪುವಂತೆ ಅಕ್ಷೇಪಣೆ ಸಲ್ಲಿಸಬಹುದು ಎಂದು ಬೆಳಗಾವಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply