Belagavi

“ಆರೋಗ್ಯ ಇಲಾಖೆಯ ವೃತ್ತಿಪರರಿಗೆ “ತಂಬಾಕು ಹಾಗೂ ತಂಬಾಕಿನಿAದಾಗುವ ದುಷ್ಪರಿಣಾಮದ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ”


ಬೆಳಗಾವಿ, ಜು.೨೭: ತಂಬಾಕು ಸೇವನೆಯಿಂದ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತವೆ ಎಂದು ಜಿಲ್ಲಾ ಸಮೀಕ್ಷಣಾಧಿಕಾರಿಗಳು ಹಾಗೂ ತಂಬಾಕು ನಿಯಂತ್ರಣಾಧಿಕಾರಿಗಳಾದ ಡಾ. ಬಿ.ಎನ್ ತುಕ್ಕಾರ ಪ್ರಾಸ್ತಾವಿಕ ನುಡಿಗಳನ್ನು ಮಾತನಾಡಿ ಕಾರ್ಯಾಗಾರದ ಉದ್ದೇಶಗಳನ್ನು ತಿಳಿಸಿದರು.
ಬೆಳಗಾವಿಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಜುಲೈ ೨೬ ರಂದು ಜರುಗಿದ ಆರೋಗ್ಯ ಇಲಾಖೆಯ ವೃತ್ತಿಪರರಿಗೆ (ಊeಚಿಟಣh Pಡಿoಜಿessioಟಿಚಿಟs) ತಂಬಾಕು ಹಾಗೂ ತಂಬಾಕಿನಿAದಾಗುವ ದುಷ್ಪರಿಣಾಮದ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕಾರ್ಯಾಗಾರ ಉದ್ಘಾಟನೆ ಮಾಡಿ ಮಾತನಾಡಿದ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ಡುಮ್ಮಗೋಳ ಸಿಗರೇಟ್ ಸೇವನೆಯಿಂದ ನಮ್ಮ ಆರೋಗ್ಯ ಹಾಳಾಗುವುದಲ್ಲದೆ, ಇನ್ನೊಬ್ಬರ ಆರೋಗ್ಯವು ಕೂಡಾ ಹಾಳಾಗುತ್ತದೆ. ನಾವೆಲ್ಲರೂ ಕೂಡ ಪರೋಕ್ಷವಾಗಿ ತಂಬಾಕು ಸೇವನೆಗೆ ಒಳಗಾಗುತ್ತಿದ್ದೆವೆ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕರಾದ ಮಹಾಂತೇಶ ಉಳ್ಳಾಗಡ್ಡಿ ಕೋಟ್ಪಾ-೨೦೦೩ ರ ಸೆಕ್ಷನ್-೪ ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಈ ಕಾನೂನು ಉಲ್ಲಂಘಿಸಿದ ವ್ಯಕ್ತಿಗೆ ರೂ.೨೦೦ ದಂಡ ವಿಧಿಸಲಾಗುವುದು ಎಂದು ಹೇಳಿದರು.
ಸೆಕ್ಷನ್-೫ ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ನಿಷೇಧಿಸಲಾಗಿದೆ, ಸೆಕ್ಷನ್-೬ರ ಪ್ರಕಾರ ಅಪ್ರಾಪ್ತ ವಯಸ್ಕರು ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಯಂತ್ರಣ ಮಾಡುವುದು ಹಾಗೂ ಸೆಕ್ಷನ್-೬(ಬಿ) ಪ್ರಕಾರ ಶಿಕ್ಷಣ ಸಂಸ್ಥೆಗಳ ೧೦೦ ಮೀಟರ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಸೆಕ್ಷನ್-೭ ಪ್ರಕಾರ ಸಿಗರೇಟ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಡ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಮಹಾಂತೇಶ ಉಳ್ಳಾಗಡ್ಡಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಡಾ.ಸರೋಜ ತಿಗಡಿ ತಂಬಾಕು ಸೇವನೆಯಿಂದ ಬಾಯಿ ಕ್ಯಾನ್ಸರ ಉಂಟಾಗುವ ಕುರಿತು ಪಿಪಿಟಿ ಮೂಲಕ ಉಪನ್ಯಾಸ ನೀಡಿದರು.
ತರಬೇತಿ ಕಾರ್ಯಾಗಾರದಲ್ಲಿ ಆರೋಗ್ಯ ಇಲಾಖೆಯ ಎಲ್ಲ ತಾಲೂಕಾ ಆರೋಗ್ಯಾಧಿಕಾರಿಗಳು ಹಾಗೂ ಮುಖ್ಯ ವೈದ್ಯಾಧಿಕಾರಿಗಳು ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋ±ದÀ ಸಮಾಜ ಕಾರ್ಯಕರ್ತೆಯಾದ ಕವಿತಾ ರಾಜನ್ನವರ ನಿರೂಪಿಸಿದರು. ಶ್ವೇತಾ ಪಾಟೀಲ ವಂದಿಸಿದರು.


Leave a Reply