Belagavi

ಸ್ವಾತಂತ್ರö್ಯ ದಿನಾಚರಣೆ ಕುರಿತು ಪೂರ್ವಭಾವಿ ಸಭೆ ಸರಳ, ಅರ್ಥಪೂರ್ಣ ಸ್ವಾತಂತ್ರö್ಯ ದಿನಾಚರಣೆ ಆಚರಿಸಲು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಸೂಚನೆ


ಬೆಳಗಾವಿ, ಜು.೩೦ :ಕೋವಿಡ್-೧೯ ಹಿನ್ನೆಲೆಯಲ್ಲಿ ಈ ಬಾರಿ ಆಗಸ್ಟ್ ೧೫ ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಸ್ವಾತಂತ್ರö್ಯ ದಿನಾಚರಣೆ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಜು.೩೦) ನಡೆದ ಸ್ವಾಂತAತ್ರö್ಯ ದಿನಾಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದು ರಾಷ್ಟಿöçÃಯ ಹಬ್ಬವಾಗಿರುವುದರಿಂದ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಪರೇಡ್ ಗೆ ಸಂಬAಧಿಸಿದAತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಪೂರ್ವಾಭ್ಯಾಸ ನಡೆಸಬೇಕು.
ಕೋವಿಡ್ ಕಾರಣದಿಂದ ಈ ಬಾರಿಯೂ ಸಹ ಶಾಲಾ ಮಕ್ಕಳಿಂದ ಯಾವುದೇ ರೀತಿಯ ಸಾಂಸ್ಕöÈತಿಕ ಕಾರ್ಯಕ್ರಮಗಳು ಮತ್ತು ಪರೇಡ್ ಕೂಡ ನಡೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಪೂರ್ವ ತಯಾರಿ ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳಿಗೆ ಸೂಚನೆ:
ಸಮಾರಂಭದ ವೇದಿಕೆಯ ಸಿದ್ಧತೆ, ಆಸನ, ಧ್ವನಿವರ್ಧಕ, ಕುಡಿಯುವ ನೀರು, ಊಟೋಪಚಾರ ಮತ್ತಿತರ ಮೂಲಸೌಕರ್ಯವನ್ನು ಒದಗಿಸಲು ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು.
ಕೋವಿಡ್-೧೯ ಹಿನ್ನೆಲೆಯಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕಾö್ಯನರ್ ಒಳಗೊಂಡ ಆರೋಗ್ಯ ಇಲಾಖೆಯ ತಂಡಗಳನ್ನು ನಿಯೋಜಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಉಪ ಸಮಿತಿಗಳು ಸಭೆ ನಡೆಸಿ ಎಲ್ಲ ಪೂರ್ವಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.
ಸ್ವಾತಂತ್ರö್ಯ ದಿನಾಚರಣೆಯಂದು ಬೆಳಿಗ್ಗೆ ೬ ಗಂಟೆಯಿAದ ೭ ಗಂಟೆಯವರೆಗೆ ಎಲ್ಲ ದೇವಾಲಯ, ಮಸೀದಿ, ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ನಗರದ ಪ್ರಮುಖ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ತಿಳಿಸಿದರು. ಸರ್ಕಾರಿ ಕಚೇರಿಗಳಿಗೂ ಕೂಡ ದೀಪಾಲಂಕಾರ ಮಾಡಬೇಕು ಎಂದು ಅವರು ತಿಳಿಸಿದರು.
ಪ್ಲಾಸ್ಟಿಕ್ ಧ್ವಜ ಬಳಕೆಗೆ ನಿಷೇಧ :
ಜಿಲ್ಲೆಯ ಎಲ್ಲ ಕಡೆಗಳಲ್ಲೂ ಧ್ವಜಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರಾಷ್ಟöçಧ್ವಜಕ್ಕೆ ಯಾವುದೇ ಕಾರಣಕ್ಕೂ ಅವಮಾನ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.
ಪ್ಲಾಸ್ಟಿಕ್ ಧ್ವಜವನ್ನು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಅಂತಹ ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವುದು ಕಂಡುಬAದಲ್ಲಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ವಿವಿಧ ಸ್ಪರ್ಧೆ ಆಯೋಜನೆ:
ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವದ ಆಚರಣೆ ಅಂಗವಾಗಿ ೭೫ ಹಳ್ಳಿಗಳನ್ನು ಆಯ್ಕೆ ಮಾಡಲಾಗಿದ್ದು, ಕಿತ್ತೂರು ಸಹ ಆಯ್ಕೆ ಆಗಿದೆ.ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಆನ್ ಲೈನ್ ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆಗಳ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಾತಂತ್ರö್ಯ ಯೋಧರಿಗೆ ಸನ್ಮಾನ :
ಕೋವಿಡ್ -೧೯ ಕಾರಣದಿಂದ ಸ್ವಾತಂತ್ರö್ಯ ಯೋಧರ ಮನೆಗೆ ತೆರಳಿ ಸನ್ಮಾನ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ತಿಳಿಸಿದರು.
ಸಭೆಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಬೇಕು, ಧ್ವಜ ಸಂಹಿತೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು,ಧ್ವಜಾರೋಹಣದ ಕಾರ್ಯಕ್ರಮದ ನೇರಪ್ರಸಾರದ ವ್ಯವಸ್ಥೆ ಮಾಡಬೇಕು ಎಂದು ಗಣ್ಯರು ಸಲಹೆ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಜಿ.ಟಿ ದಿನೇಶಕುಮಾರ್, ಡಿ.ಸಿ.ಪಿ ವಿಕ್ರಮ್ ಆಮಟೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಶಿಕಾಂತ ಮುನ್ಯಾಳ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಅಧಿಕಾರೇತರ ಗಣ್ಯರ ಸಭೆಯಲ್ಲಿ ಉಪಸ್ಥಿತರಿದ್ದರು.


Leave a Reply