Belagavi

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ


ಬೆಳಗಾವಿ, ಆ.೦೩ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಲ್ಲಿ ಕ್ರೀಡಾಪಟುಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಿದ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಕ್ರೀಡಾ ಪೋಷಕರಿಗೆ ೨೦೨೧-೨೨ನೇ ಸಾಲಿನ ಕರ್ನಾಟಕ “ಕ್ರೀಡಾ ಪೋಷಕ ಪ್ರಶಸ್ತಿ”ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇರಬೇಕಾದ ಅರ್ಹತೆಗಳು :
ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ ೫ ವರ್ಷಗಳಲ್ಲಿ ರಾಜ್ಯ ರಾಷ್ಟಿöçÃಯ ಮತ್ತು ಅಂತರರಾಷ್ಟಿöçÃಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಕರ್ನಾಟಕ ನಿವಾಸಿಗಳಲ್ಲದ ಹಾಗೂ ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ತೊಡಗಿಸದೇ ಇರುವ ಕ್ರೀಡಾ ಪೋಷಕರುಗಳು ಈ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ ಮತ್ತು ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಬಗ್ಗೆ ಪೋಲಿಸ್ ವೆರಿಫಿಕೇಷನ್ ಸರ್ಟಿಫಿಕೇಟ್ ಕಡ್ಡಾಯವಾಗಿ ಸಲ್ಲಿಸಬೇಕು.
ಅರ್ಹ ಕ್ರೀಡಾ ಪೋಷಕರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಬೆಳಗಾವಿ ಈ ಕಚೇರಿಗೆ ಸಲ್ಲಿಸಬೇಕು.
ಅರ್ಜಿಗಳನ್ನು ಸಲ್ಲಿಸಲು ಆ.೨೩ ಕೊನೆಯ ದಿನಾಂಕವಾಗಿರುತ್ತದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಳಗಾವಿ ಕಚೇರಿಯ ದೂರವಾಣಿ ಸಂಖ್ಯೆ ೦೮೩೧-೨೪೭೪೧೦೧ ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply