Belagavi

ಇನ್ನೂ ೮-೧೦ ದಿನ ಕಾಳಜಿ ಕೇಂದ್ರಗಳಲ್ಲೇ ವ್ಯವಸ್ಥೆ ಮಾಡಿ ಅಧಿಕಾರಿಗಳ ಜೊತೆಗೆ ಪರಿಶೀಲನೆ ಸಭೆ ನಡೆಸಿದ ಸಚಿವ ಗೋವಿಂದ ಕಾರಜೋಳ


ಬೆಳಗಾವಿ: ಇನ್ನು ೮-೧೦ ದಿನಗಳವರೆಗೆ ಮನೆಗಳಲ್ಲಿ ನೀರು ಬಂದಿದ್ದು, ಅದು ಒಣಗುವವರೆಗೂ ಕಾಳಜಿ ಕೇಂದ್ರಗಳಲ್ಲಿಯೇ ಎಲ್ಲ ರೀತಿಯ ವ್ಯವಸ್ಥೆ ಮಾಡಬೇಕು. ಕಾರಣಕ್ಕೂ ಕಾಳಜಿ ಕೇಂದ್ರಗಳಿAದ ಬಿಡುಗಡೆ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಕೊರೊನಾ-ನೆರೆ ನಿರ್ವಹಣೆ ಹೊಣೆ ಹೊತ್ತಿರುವ ಗೋವಿಂದ ಕಾರಜೋಳ ಅವರು ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಜೊತೆಗೆ ಪರಿಶೀಲನೆ ಸಭೆ ನಡೆಸಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದರು. ೨೦೨೧-೨೨ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರವಾಹ ಮತ್ತು ಮಳೆಯಿಂದ ಹಾನಿಯಾಗಿ ಜನರಿಗೆ ತೊಂದರೆಯಾಗಿದ್ದು, ಜಾನುವಾರು ಕಳೆದುಕೊಂಡಿರುವ ಬಗ್ಗೆ ಪರಿಶೀಲನೆ ಮಾಡಿದ್ದೇನೆ. ಸುಮಾರು ೫೧ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿದ್ದೇವು. ಇವುಗಳಲ್ಲಿ ೩೮ ಸಾವಿರ ಜನರಿಗೆ ಊಟೋಪಚಾರ ವ್ಯವಸ್ಥೆ ಮಾಡಿದ್ದೇವು. ಅದೇ ರೀತಿ ಜಾನುವಾರುಗಳಿಗೆ ಮೇವು, ಔಷಧಿ ವ್ಯವಸ್ಥೆ ಮಾಡಿದ್ದೇವೆ. ಹೀಗಾಗಿ ಸಂತ್ರಸ್ತರ ಮನೆ ಒಣಗುವವರೆಗೂ ಇನ್ನು ೮ ರಿಂದ ೧೦ ದಿನಗಳು ಕಾಳಜಿ ಕೇಂದ್ರಗಲ್ಲಿಯೇ ಸಂತ್ರಸ್ತರಿಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.
ಇನ್ನು ಪ್ರವಾಹ ಹಾಗೂ ಮಳೆಯಿಂದ ರಸ್ತೆ, ಸೇತುವೆ, ಕೆರೆ ಕಟ್ಟೆಗಳು, ಬಹಳಷ್ಟು ಪ್ರಮಾಣದಲ್ಲಿ ರೈತರ ಬೆಳೆ ಹಾನಿಯಾಗಿವೆ. ಅದೇ ರೀತಿ ೫೬೦ ಕಿ.ಮಿ.ನಷ್ಟು ಪಂಚಾಯತ್‌ರಾಜ್ ಇಲಾಖೆ ವ್ಯಾಪ್ತಿಯ ರಸ್ತೆ ಹಾನಿಯಾಗಿದೆ. ೪೧ ಸಿಡಿ ವರ್ಕಗಳು ಹಾನಿಯಾಗಿವೆ. ಲೋಕೋಪಯೋಗಿ ಇಲಾಖೆಯ ೩೦೦ ಕಿ.ಮಿ. ರಸ್ತೆ ಕೊಚ್ಚಿಕೊಂಡು ಹೋಗಿದೆ. ೭೦ ಸೇತುವೆ ಮತ್ತು ಸಿಡಿ ವರ್ಕಗಳಿಗೆ ಹಾನಿಯಾಗಿದೆ. ಅಂದಾಜು ೩೫೦ ಕೋಟಿ ರೂಪಾಯಿಯಷ್ಟು ಹಾನಿಯಾಗಿದೆ ಎಂದು ಹೆಚ್ಚಿನ ಮಾಹಿತಿ ನೀಡಿದರು.
ನಿರಾಶೆಯಿಂದ ಸಿದ್ದರಾಮಯ್ಯ ಟೀಕೆ
ಏನೋ ಅನಾಹುತ, ಮಿರಾಕಲ್ ಆಗಿ ಮತ್ತೆ ಮುಖ್ಯಮಂತ್ರಿ ಆಗುತ್ತೇನೆಂದು ಸಿದ್ದರಾಮಯ್ಯ ತಿಳಿದುಕೊಂಡಿದ್ದರು. ಆದರೆ ನಿರಾಸೆಯಾಗಿ ಬಿಜೆಪಿ ಸರ್ಕಾರದ ವಿರುದ್ಧ ಏನೇನೋ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದರು.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಬಿಜೆಪಿಯವರು ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂಬ ಸಿದ್ದರಾಮಯ್ಯ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು,. ನಮ್ಮ ಸಚಿವ ಸಂಪುಟ ಬಹಳ ಸೌಹಾರ್ದಯುತ, ಶಾಂತ ರೀತಿಯಲ್ಲಿ ಆಗಿದೆ. ಹೀಗಾಗಿ ಅವರಿಗೆ ನಿರಾಸೆಯಾಗಿ ಸರ್ಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.


Leave a Reply