karanatakaKoppal

ತರಲಕಟ್ಟಿ ಗ್ರಾಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಪತ್ರಿಕಾ ದಿನಾಚರಣೆ


ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ತರಲಕಟ್ಟಿ ಗ್ರಾಮದಲ್ಲಿ ವಿಶ್ವ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಯಲಬುರ್ಗಾ ತಾಲೂಕ ಅಧ್ಯಕ್ಷರಾದ ಖಾಜಾವಲಿ ವಹಿಸಿಕೊಂಡಿದ್ದರು.

ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಲಾಯಿತು. ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶಾಂತಾ ಶರಣು ಹಾವೇರಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾದ ಮಲ್ಲಿಕಾರ್ಜುನ್ ಹೊಸಮನಿ, ಸಂಘದ ಜಿಲ್ಲಾ ಅಧ್ಯಕ್ಷರಾದ ಆರ್ ಶರಣಪ್ಪ ಗುಮಗೇರಾ ಭಾಗವಹಿಸಿದ್ದರು.

ಅತಿಥಿಗಳಾಗಿ ಪ್ರಕಾಶ್ ಓಂ ಮಾಲಿಪಾಟೀಲ್ ಗ್ರಾಮ ಪಂಚಾಯತ್ ಸದಸ್ಯರು ತರಲಕಟ್ಟಿ. ಹನುಮೇಶ್ ಎಸ್ ವಡ್ಡರ್ ಗ್ರಾಮ ಪಂಚಾಯತ್ ಸದಸ್ಯರು ತರಲಕಟ್ಟಿ. ಬಸಪ್ಪ ಎಂ ಕೋಳೂರು ಗ್ರಾಮ ಪಂಚಾಯತಿ ಸದಸ್ಯರು ತರಲಕಟ್ಟಿ , ಗ್ರಾಮ ಪಂಚಾಯಿತಿ ಪಿಡಿಓ ರಾದ ಮಹಾಂತೇಶ್ ಬಾಳಿಕಾಯಿ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು

ವಿಶ್ವ ಪತ್ರಿಕಾ ದಿನಾಚರಣೆಯ ಅಂಗವಾಗಿ ಕನ್ನಡ ಕೋಗಿಲೆ ಖ್ಯಾತಿಯ ಇಟಗಿ ಹಾಗೂ ಕುಮಾರ್ ಮಂಜು ಕುಚನೂರ್ ಡ್ರಾಮಾ ಜೂನಿಯರ್ಸ್ ಖ್ಯಾತಿಯ ಕಲಾವಿದ ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಮಲ್ಲಿಕಾರ್ಜುನ ಹೊಸಮನಿ ರವರು ಪತ್ರಿಕಾ ದಿನಾಚರಣೆಯನ್ನು ಪತ್ರಕರ್ತರು ಮಾಡುವುದರ ಜೊತೆಗೆ ಗ್ರಾಮಸ್ಥರು ಮತ್ತು ಜನಪ್ರತಿನಿಧಿಗಳು ಸೇರಿ ಮಾಡಿದರೆ ಪತ್ರಕರ್ತರಿಗೆ ಒಂದು ಗೌರವ ಸಲ್ಲಿಸಿದಂತಾಗುತ್ತದೆ .ಹಾಗಾಗಿ ಅಂತಹ ಕಾರ್ಯಕ್ರಮವನ್ನು ತರಲಕಟ್ಟಿ ಗ್ರಾಮಸ್ಥರು ಮಾಡಿದ್ದಾರೆ ಎಂದರು. ಸಂಘದ ಜಿಲ್ಲಾಧ್ಯಕ್ಷರಾದ ಆರ್ ಶರಣಪ್ಪ ಗುಮಗೇರಾ ಮಾತನಾಡಿ ಕರ್ನಾಟಕ ಪತ್ರಕರ್ತರ ಸಂಘದಿಂದ ಪತ್ರಕರ್ತರಿಗೆ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಪತ್ರಕರ್ತರಿಗೆ ಹಾಗೂ ಗಣ್ಯರಿಗೆ ಇದೇ ಸಂದರ್ಭದಲ್ಲಿ ಸನ್ಮಾನ ಮಾಡಿ ಗೌರವಿಸಲಾಯಿತು.

ನಿರೂಪಣೆ ಮತ್ತು ವಂದನಾರ್ಪಣೆಯನ್ನು ಗ್ರಾಮದ ವಕೀಲರಾದ ಮಲ್ಲನಗೌಡ ಪಾಟೀಲ್ ನಡೆಸಿಕೊಟ್ಟರು.

ವರದಿ-ಆರ್ ಶರಣಪ್ಪ ಗುಮಗೇರಾ.


Leave a Reply